ETV Bharat / state

ವಿದ್ಯಾರ್ಥಿಗಳ ಓದಿಗೆ ಸಮಸ್ಯೆಯಾಗದಂತೆ ನೆಟ್‍ವರ್ಕ್ ಸೌಲಭ್ಯ ಉತ್ತಮಗೊಳಿಸಿ: ನಳಿನ್ ಕುಮಾರ್

author img

By

Published : Jun 2, 2021, 1:24 AM IST

ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್

ಕೊರೊನಾದಿಂದ ಶಾಲಾ –ಕಾಲೇಜುಗಳು ಪ್ರಾರಂಭವಾಗದಿದ್ದರೂ ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಇದರಿಂದ ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ವರ್ಕ್ ಫ್ರಂ ಹೋಮ್‍ನಡಿ ಕಾರ್ಯನಿರ್ವಹಿಸುತ್ತಿರುವವರಿಗೆ ನೆಟ್‍ವರ್ಕ್ ಸಮಸ್ಯೆ ಉಂಟಾಗಿ ಎತ್ತರ ಪ್ರದೇಶಗಳನ್ನು ಹುಡುಕಿಕೊಂಡು ಹೋಗುವಂತ ಪರಿಸ್ಥಿತಿ ಉಂಟಾಗಿದೆ ಎಂದು ನಳಿನ್ ತಿಳಿಸಿದ್ದಾರೆ.

ಮಂಗಳೂರು: ದ.ಕ. ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮೊಬೈಲ್ ನೆಟ್‍ವರ್ಕ್ ಸೌಲಭ್ಯ ಒದಗಿಸುವುದರೊಂದಿಗೆ ಮೊಬೈಲ್ ಸೇವಾ ಪೂರೈಕೆದಾರರು ಉತ್ತಮ ಸೇವೆಯನ್ನು ಒದಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಸೂಚನೆ ನೀಡಿದರು.

ನಗರದ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಕುರಿತು ಮಾತನಾಡಿದ ಅವರು, ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆಯಿಂದಾಗಿ ಸರ್ಕಾರದ ಅನೇಕ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ಜನಸಾಮಾನ್ಯರ ದೈನಂದಿನ ದೂರವಾಣಿ ಸೌಲಭ್ಯವನ್ನು ಉಪಯೋಗಿಸಲು ತೊಂದರೆಯಾಗುತ್ತಿದೆ. ಆದ್ದರಿಂದ ಎಲ್ಲಾ ಮೊಬೈಲ್ ನೆಟ್‍ವರ್ಕಿಂಗ್ ಕಂಪೆನಿಗಳು ಎಚ್ಚರ ವಹಿಸುವುದರೊಂದಿಗೆ ಉತ್ತಮ ಸೇವೆಯನ್ನು ಒದಗಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ನೆಟ್‍ವರ್ಕ್ ಸಮಸ್ಯೆಯಿಂದಾಗಿ ಕೋವಿಡ್ ಸೋಂಕಿತರಿಗೆ ವೈದ್ಯಕೀಯ ಸೌಲಭ್ಯ ಕೊಡಲು ಪಡಿತರ ವಿತರಣೆ, ಜಿ.ಪಿ.ಎಸ್. ಆಧಾರದ ಮೇಲೆ ಗೃಹ ನಿರ್ಮಾಣದ ಅನುದಾನ ನೀಡಲು ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಕಳೆದ ವರ್ಷ ಕೊರೊನಾದಿಂದ ಶಾಲಾ –ಕಾಲೇಜುಗಳು ಪ್ರಾರಂಭವಾಗದಿದ್ದರೂ ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಇದರಿಂದ ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ವರ್ಕ್ ಫ್ರಂ ಹೋಮ್‍ನಡಿ ಕಾರ್ಯನಿರ್ವಹಿಸುತ್ತಿರುವವರಿಗೆ ನೆಟ್‍ವರ್ಕ್ ಸಮಸ್ಯೆ ಉಂಟಾಗಿ ಎತ್ತರ ಪ್ರದೇಶಗಳನ್ನು ಹುಡುಕಿಕೊಂಡು ಹೋಗುವಂತ ಪರಿಸ್ಥಿತಿ ಉಂಟಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಜ್ಞಾ, ಶಾಸಕರಾದ ಉಮಾನಾಥ್ ಕೋಟ್ಯಾನ್, ಭರತ್ ವೈ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯಕ್, ಸಂಜೀವ ಮಠಂದೂರ್ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದನ್ನು ಓದಿ:ವೃದ್ಧಾಶ್ರಮಕ್ಕೆ 1ಲಕ್ಷ ರೂ. ದೇಣಿಗೆ ನೀಡಿ 42ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.