ETV Bharat / state

ಮಂಗಳೂರಿನ ಮಾಜಿ ಶಾಸಕನ ಪುತ್ರನ ಮನೆ ಮೇಲೆ ಎನ್​ಐಎ ದಾಳಿ

author img

By

Published : Aug 4, 2021, 10:36 AM IST

Updated : Aug 4, 2021, 11:07 AM IST

Mangaluru
ಬಿ.ಎಂ ಪಾಷಾ ಮನೆ ಮೇಲೆ ಎನ್​ಐಎ ದಾಳಿ

ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಪುತ್ರ ಬಿ.ಎಂ ಪಾಷಾ ಅವರ ಮನೆ ಮೇಲೆ ಬೆಂಗಳೂರಿನಿಂದ ಆಗಮಿಸಿರುವ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಪುತ್ರ ಬಿ.ಎಂ ಪಾಷಾ ಅವರ ಮನೆಗೆ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಎನ್‌ಐಎ ಅಧಿಕಾರಿಗಳು ಮುಂಜಾನೆ ನಾಲ್ಕು ಕಾರುಗಳಲ್ಲಿ ಸ್ಥಳೀಯ ಪೊಲೀಸರ ಭದ್ರತೆಯೊಂದಿಗೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ ಬಾಷಾ ಮನೆಗೆ ಆಗಮಿಸಿದ್ದರು. ಬಿ.ಎಂ ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದಾರೆ.

ಬಾಷಾ ಮನೆ ಮೇಲಿನ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿ ಐಸಿಸ್ ಸೇರಿದ್ದಳು ಎಂದು ಈ ಹಿಂದೆ ಹೇಳಲಾಗಿತ್ತು.‌

Last Updated :Aug 4, 2021, 11:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.