ETV Bharat / state

ಪ್ರಶಸ್ತಿಗಳೇ ಸಾಧಕರನ್ನ ಹುಡುಕಿ ಬರಬೇಕು.. ರಾಜ್ಯೋತ್ಸವ ಪ್ರಶಸ್ತಿಗೆ ಇನ್ನುಂದೆ ಅರ್ಜಿ ಹಾಕುವಂತಿಲ್ಲ: ಸಚಿವ ಸುನಿಲ್ ಕುಮಾರ್

author img

By

Published : Feb 5, 2022, 10:01 PM IST

ಪ್ರಶಸ್ತಿಯನ್ನು ಯಾರೂ ಹುಡುಕಿಕೊಂಡು ಹೋಗಬಾರದು. ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ..

no-need-to-apply-for-rajyotsava-award-from-next-year
ರಾಜ್ಯೋತ್ಸವ ಪ್ರಶಸ್ತಿಗೆ ಇನ್ನುಂದೆ ಅರ್ಜಿ ಹಾಕುವಂತಿಲ್ಲ: ಸಚಿವ ಸುನಿಲ್ ಕುಮಾರ್

ಮಂಗಳೂರು : ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ. ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ನಗರದ ಕೊಡಿಯಾಲ್ ಬೈಲ್‍ನಲ್ಲಿರುವ ಶಾರದಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರಶಸ್ತಿಯನ್ನು ಯಾರೂ ಹುಡುಕಿಕೊಂಡು ಹೋಗಬಾರದು. ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದರು.

ನಾಡಿನೆಲ್ಲೆಡೆ ನೀರಿಗಾಗಿ ಗಲಭೆ, ಸಂಘರ್ಷ, ನ್ಯಾಯಾಲಯದ ಮೆಟ್ಟಿಲೇರುವ ಈ ಸಂದರ್ಭದಲ್ಲಿ ಮಹಾಲಿಂಗ ನಾಯ್ಕರ ಸಾಧನೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ. ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ದೇಶದ ಜನರನ್ನು ಕಣ್ತೆರೆಸುವಲ್ಲಿ ಈ ಪ್ರಶಸ್ತಿ ಅರ್ಹವಾಗಿಯೇ ಮಹಾಲಿಂಗ ನಾಯ್ಕರನ್ನು ಹುಡುಕಿಕೊಂಡು ಬಂದಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Watch : ಹೈದರಾಬಾದ್​ ICRISAT ಕ್ಯಾಂಪಸ್​​​ ತೋಟದಲ್ಲಿ ಕಡಲೆ ತಿಂದ ನಮೋ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.