ಫರ್ನಾಂಡಿಸ್​​​ ಅಂತಿಮ ದರ್ಶನ ಪಡೆಯಲಿದ್ದಾರೆ ರಾಹುಲ್​ ಗಾಂಧಿ: ಡಿ.ಕೆ ಶಿವಕುಮಾರ್

author img

By

Published : Sep 14, 2021, 12:02 PM IST

DK Shivakumar
ಡಿ.ಕೆ ಶಿವಕುಮಾರ್ ()

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ಸೈಂಟ್ ಪ್ಯಾಟ್ರಿಕ್ ಚರ್ಚ್​ನಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮಂಗಳೂರು: ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್​ನ ರಾಷ್ಟ್ರೀಯ ನಾಯಕರು ಆಸ್ಕರ್ ಫರ್ನಾಂಡಿಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಇಂದು ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಚೇರಿ, ಉಡುಪಿ ಚರ್ಚ್ ಮತ್ತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಾಳೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್​​ನಲ್ಲಿ ಪೂಜೆ ಮತ್ತು ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ ಬಳಿಕ ಬೆಂಗಳೂರಿಗೆ ಕೊಂಡೊಯ್ಯಲಾಗುವುದು ಎಂದರು.

ರಾಹುಲ್ ಗಾಂಧಿ ಸೇರಿ ಅನೇಕರು ಫರ್ನಾಂಡಿಸ್​​​ ಅಂತಿಮ ದರ್ಶನ ಪಡೆಯಲಿದ್ದಾರೆ: ಡಿ.ಕೆ ಶಿವಕುಮಾರ್

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ಸೈಂಟ್ ಪ್ಯಾಟ್ರಿಕ್ ಚರ್ಚ್​ನಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಮಂಗಳೂರು ಮತ್ತು ಬೆಂಗಳೂರಿಗೆ ಹಿರಿಯ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಆಸ್ಕರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಓದಿ: ಸೆಪ್ಟೆಂಬರ್ 16ಕ್ಕೆ ಬೆಂಗಳೂರಿನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ‌ ಅಹ್ಮದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.