ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ಗಲಭೆ, ಇಬ್ಬರು ವಿದ್ಯಾರ್ಥಿಗಳು ಗಂಭೀರ

author img

By

Published : Nov 24, 2021, 4:17 PM IST

Putturu student fight

ಪುತ್ತೂರಿನ ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಇಂದು ಎಬಿವಿಪಿ ವಿದ್ಯಾರ್ಥಿಗಳು ಪುತ್ತೂರು ಠಾಣೆಯ ಬಳಿ ಪ್ರತಿಭಟನೆ ನಡೆಸಿದರು.

ಪುತ್ತೂರು: ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳಲ್ಲಿ ಇಂದು (ಬುಧವಾರ) ಮತ್ತೆ ಹೊಡೆದಾಟ ನಡೆದಿದ್ದು, ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ.

Putturu student fight
ಗಾಯಗೊಂಡ ವಿದ್ಯಾರ್ಥಿ

ಗಾಯಗೊಂಡವರನ್ನು ವಿದ್ಯಾರ್ಥಿಗಳಾದ ಸೈಫುದ್ದೀನ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ಕೂಡಾ ಗಾಯಗೊಂಡ ಬಗ್ಗೆ ವರದಿಯಾಗಿದೆ.

Putturu student fight
ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗಳು ಪುತ್ತೂರು ಪೊಲೀಸ್‌ ಠಾಣೆಯ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ 30 ಜನರ ಗುಂಪೊಂದು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ವರದಿಯಾಗಿದೆ.

ಗಾಯಗೊಂಡವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ, ಮೂವರು ಆಸ್ಪತ್ರೆಗೆ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.