ETV Bharat / state

ರಾಜ್ಯ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಸ್ಪೀಕರ್ ಯು ಟಿ ಖಾದರ್

author img

By

Published : Jul 31, 2023, 10:44 PM IST

U T Khader
ಸ್ಪೀಕರ್ ಯು.ಟಿ. ಖಾದರ್

ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಕಲಾಪ ಡಿಜಿಟಲೀಕರಣ ಯೋಜನೆ ಅನುಷ್ಠಾನಗೊಂಡಿದೆ. ಜೊತೆಗೆ ಕರ್ನಾಟಕ ರಾಜ್ಯ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ ನಡೆದಿದೆ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಹೇಳಿದರು.

ಮಂಗಳೂರು: ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆಯನ್ನು ಹೊಂದಿರುವುದಾಗಿ ರಾಜ್ಯ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ತಿಳಿಸಿದ್ದಾರೆ.

ಕಲಾಪ ವ್ಯರ್ಥವಾಗದಂತೆ ನಿಭಾಯಿಸುವ ಹೊಣೆಗಾರಿಕೆ: ನಗರದ ಪತ್ರಿಕಾ ಭವನದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ. ಇದರಿಂದ ಸದನದ ಕಲಾಪವನ್ನು ಸಾರ್ವಜನಿಕರು ವೀಕ್ಷಿಸಿ ಸಮಸ್ಯೆ ತಿಳಿಸಲು ಅನುಕೂಲ ಆಗಲಿದೆ ಎಂದು ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠಗೊಳ್ಳಬೇಕಾದರೆ ವಿಧಾನಸಭಾ ಕಲಾಪಗಳು ಪರಿಣಾಮಕಾರಿಯಾಗಬೇಕು. ಆಗ ಉತ್ತಮ ಶಾಸನಗಳು ಜಾರಿಯಾಗಬಹುದು. ವಿಧಾನಸಭಾ ಕಲಾಪ ವ್ಯರ್ಥವಾಗದಂತೆ ನಿಭಾಯಿಸುವ ಹೊಣೆಗಾರಿಕೆ ಇದೆ ಎಂದು ಅವರು ತಿಳಿಸಿದರು.

ಸರ್ಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ವಿಪಕ್ಷಗಳು ಕಲಾಪದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ಪೀಕರ್‌ ಸ್ಥಾನದ ಪಾತ್ರವೂ ಮಹತ್ವದ್ದಾಗಿದೆ. ಸದನದಲ್ಲಿ ಪರಸ್ಪರ ಆರೋಪ ಸಹಜ. ಈ ನಡುವೆ ಕಲಾಪವನ್ನು ನಿರ್ದಿಷ್ಟ ಗುರಿಯತ್ತ ತಲುಪಿಸುವ ಗುರಿ ಸ್ಪೀಕರ್ ಮೇಲಿರುತ್ತದೆ. ಮಸೂದೆಯ ಬಗ್ಗೆ ಉತ್ತಮ ರೀತಿಯ ಚರ್ಚೆ ನಡೆದು ಅದು ಕಾನೂನು ಆಗಿ ಜಾರಿಯಾದರೆ ಪ್ರಜೆಗಳಿಗೆ ಅನುಕೂಲ ಆಗುತ್ತದೆ. ಸದನದಲ್ಲಿ ಹೊಸದಾಗಿ ಆಯ್ಕೆ ಆದ ಶಾಸಕರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ.

ಮಾಧ್ಯಮ ಸಂವಾದದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿದ್ದರು. ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು. ಭಾಸ್ಕರ್ ರೈ ಕಟ್ಟ ವಂದಿಸಿದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ 4030 ಕೋಟಿ ರೂ. ಅನುದಾನ ಹೆಚ್ಚಳ: ಬಿಜೆಪಿಯವರ ಆರೋಪ ಸುಳ್ಳೆಂದ ಸಚಿವ ಹೆಚ್ ಸಿ ಮಹದೇವಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.