ETV Bharat / state

ಹವಾಮಾನ ವೈಪರೀತ್ಯ: ಕೊನೆ ಕ್ಷಣದಲ್ಲಿ ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ

author img

By

Published : Sep 2, 2022, 7:18 PM IST

ಹೆಲಿಕಾಪ್ಟರ್​ನಲ್ಲಿ ಪ್ರಧಾನಿ ಮೋದಿ ವಿಮಾನ ನಿಲ್ದಾಣಕ್ಕೆ ತೆರಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ಮೋದಿ ತೆರಳಿದರು.

weather-change-pm-modi-went-to-airport-by-road-in-mangaluru
ಹವಾಮಾನ ವೈಪರೀತ್ಯ: ಕೊನೆ ಕ್ಷಣದಲ್ಲಿ ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ

ಮಂಗಳೂರು: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್​ಎಂಪಿಎಯಲ್ಲಿ ಬಿಜೆಪಿ ಮುಖಂಡರ ಸಭೆ ನಡೆಸಿ ವಿಮಾನ‌ ನಿಲ್ದಾಣಕ್ಕೆ ಹೆಲಿಕಾಪ್ಟರ್ ಬದಲು ರಸ್ತೆ ಮೂಲಕ ತೆರಳಿದ್ದಾರೆ.

ಮಂಗಳೂರು ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಎನ್​ಎಂಪಿಎ ಹೆಲಿಪ್ಯಾಡ್​ನಲ್ಲಿ ಬಿಜೆಪಿ ಕೋರ್ ಕಮಿಟಿ ನಾಯಕರ ಜೊತೆಗೆ ಸಭೆ ನಡೆಸಿದರು. ಬಳಿಕ ಅವರು ಹೆಲಿಕಾಪ್ಟರ್​ನಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಹೆಲಿಕಾಪ್ಟರ್​ನಲ್ಲಿ ತೆರಳುವುದನ್ನು ರದ್ದುಗೊಳಿಸಲಾಯಿತು.

ಹವಾಮಾನ ವೈಪರೀತ್ಯ: ಕೊನೆ ಕ್ಷಣದಲ್ಲಿ ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ

ಹೀಗಾಗಿಯೇ ರಸ್ತೆ ಮೂಲಕ ಪ್ರಧಾನಿಯವರನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಮೂಲಕ ಅವರು ನವದೆಹಲಿಗೆ ತೆರಳಿದರು.

ಇದನ್ನೂ ಓದಿ: ಮಂಗಳೂರು: ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.