ETV Bharat / state

ಮಂಗಳೂರು: ಬಸ್​​ನಿಂದ ಬಿದ್ದು ಮಹಿಳೆ ಸಾವು

author img

By ETV Bharat Karnataka Team

Published : Jan 15, 2024, 6:04 PM IST

ಮಂಗಳೂರು
ಮಂಗಳೂರು

ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಎಂಬಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ, ಬಸ್​ನೊಳಗಿದ್ದ ಮಹಿಳೆ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಗಳೂರು: ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್​ನೊಳಗಿದ್ದ ಮಹಿಳೆ ಕೆಳಗೆಬಿದ್ದು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಜೋಕಟ್ಟೆ ಎಂಬಲ್ಲಿ ನಡೆದಿದೆ. ಈರಮ್ಮ‌ (65) ಮೃತಪಟ್ಟ ಮಹಿಳೆ. ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಈರಮ್ಮ ಎಂಬುವವರು ತನ್ನ ಮಗಳೊಂದಿಗೆ ಖಾಸಗಿ ಬಸ್​ನಲ್ಲಿ ಸುರತ್ಕಲ್ ಕಡೆಗೆ ಪ್ರಯಾಣಿಸುತ್ತಿದ್ದರು. ಬಸ್ ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್ ತಲುಪಿದಾಗ, ಬೆಳಗ್ಗೆ 10:10 ರ ಸುಮಾರಿಗೆ, ಅದರ ಚಾಲಕ ಅನಿಲ್ ಜಾನ್ ಲೋಬೋ ಹಠಾತ್​ ಆಗಿ ಬ್ರೇಕ್ ಹಾಕಿದ್ದಾರೆ.

ಬಸ್ ಚಾಲಕನ ಹಠಾತ್ ಬ್ರೇಕ್​ಗೆ ಚಾಲಕನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ. ಇದಲ್ಲದೇ, ಬಸ್​​​ನ ಹಿಂದಿನ ಎಡ ಚಕ್ರವು ಈರಮ್ಮನ ಮೇಲೆ ಚಲಿಸಿದೆ. ಇದರ ಪರಿಣಾಮ ಅವರಿಗೆ ತಲೆಗೆ ಗಾಯವುಂಟಾಗಿ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉತ್ತರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಸರ್ಕಾರಿ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಸಾವು (ಪ್ರತ್ಯೇಕ ಘಟನೆ) : ಸರ್ಕಾರಿ ಸಾರಿಗೆ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದ ಬಳಿ (ಜೂನ್ -22-23) ಸೋಮವಾರ ಬೆಳಗ್ಗೆ ನಡೆದಿತ್ತು. ಮೃತ ಬಾಲಕಿಯನ್ನು ಮಧು ಚಕ್ರಸಾಲಿ (13) ಎಂದು ಗುರುತಿಸಲಾಗಿತ್ತು. ಬಾಲಕಿಯು ವಾಸನ ಗ್ರಾಮದಿಂದ ಕುಸನೂರು ಗ್ರಾಮದಲ್ಲಿರುವ ಪ್ರೌಢಶಾಲೆಗೆ ಆಗಮಿಸುವ ವೇಳೆ ಈ ಘಟನೆ ಸಂಭವಿಸಿತ್ತು.

ಬಸ್​ ಜನರಿಂದ ತುಂಬಿದ್ದ ಕಾರಣಕ್ಕಾಗಿ ಬಾಲಕಿ ಬಾಗಿಲ ಬಳಿಯೇ ನಿಂತಿದ್ದಳು. ಅಲ್ಲದೇ ರಸ್ತೆ ಕೂಡ ಹದಗೆಟ್ಟಿತ್ತು ಎಂದು ಹೇಳಲಾಗಿತ್ತು. ಈ ವೇಳೆ ಬಾಗಿಲಿನ ಬಳಿ ನಿಂತಿದ್ದ ಬಾಲಕಿ ಆಯತಪ್ಪಿ ಕೆಳಗೆಬಿದ್ದು ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದರು. ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನೆ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ​ ದಾಖಲಾಗಿತ್ತು. ಎಫ್​ಐಆರ್​ನಲ್ಲಿ, ಸಾರಿಗೆ ಬಸ್​ ಚಾಲಕ ನಿರ್ಲಕ್ಷ್ಯತನದಿಂದ ವೇಗವಾಗಿ ಬಸ್​ ಚಲಾಯಿಸಿದ್ದರಿಂದ ಬಸ್​ನ ಮುಂಭಾಗದ ಬಾಗಿಲಿನಲ್ಲಿ ನಿಂತಿದ್ದ ಬಾಲಕಿ ಆಯತಪ್ಪಿ ಕೆಳಗೆ ಬಿದ್ದಿದ್ದಳು. ಇದರಿಂದ ಗಂಭೀರ ಗಾಯಗೊಂಡ ಬಾಲಕಿಯನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ದೂರಲಾಗಿತ್ತು.

ಇದನ್ನೂ ಓದಿ: ಹಾವೇರಿ : ಸರ್ಕಾರಿ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.