ETV Bharat / state

ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: ಬಿಎಸ್ ವೈ

author img

By

Published : Apr 25, 2023, 3:05 PM IST

bsy
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ಸಿದ್ದರಾಮಯ್ಯನವರು ಲಿಂಗಾಯತ ಸಿಎಂ ಭ್ರಷ್ಟರು ಎಂದು ಹಗುರವಾಗಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವರುಣಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸಿದ್ದರಾಮಯ್ಯನವರು ಲಿಂಗಾಯುತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಅವರು ರಾಜ್ಯದ ಜನರಿಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕ್ಷಮೆ ಯಾಚಿಸುವಂತೆ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.

ಜಿಲ್ಲೆಯ ಜಗಳೂರಿನಲ್ಲಿ ಅಭ್ಯರ್ಥಿ ಎಸ್ ವಿ ರಾಮಚಂದ್ರ ಪರ ರೋಡ್ ಶೋ ಮಾಡುವ ಮುನ್ನ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದ್ದು, ಇಂದಿನಿಂದ ರಾಜ್ಯಾದ್ಯಂತ ಪ್ರವಾಸ ಆರಂಭವಾಗಿದೆ. ಬಿಜೆಪಿ ರಾಜ್ಯದಲ್ಲಿ 140 ಸೀಟು ಗೆದ್ದು, ಅಧಿಕಾರ ಹಿಡಿಯುತ್ತದೆ. ಇಂದಿನಿಂದ ಬೇರೆ ಬೇರೆ ಭಾಗದಲ್ಲಿ 70 ಕ್ಷೇತ್ರಗಳಲ್ಲಿ ನಾನು ಕೂಡ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದರು.

ಇನ್ನು 4% 2 ಬಿ ‌ಮುಸ್ಲಿಂ ಮೀಸಲಾತಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇದೇ 09 ಕ್ಕೆ ಮುಂದೂಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡುವ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಇನ್ನು ಲಿಂಗಾಯತ ಸಿಎಂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಈ ಬಾರಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಸೋಲು ನಿಶ್ಚಿತವಾಗಿದೆ ಎಂದರು.

ವಿರೋಧ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಈ ರೀತಿ ಮಾತನಾಡಬಾರದು. ಅದು ಅವರಿಗೆ ಶೋಭೆ ತರುವುದಿಲ್ಲ. ಈ ರೀತಿ ಹೇಳಿಕೆಗಳನ್ನು ಸಿದ್ದರಾಮಯ್ಯ ಕೊಡಬಾರದು. ರಾಜ್ಯದ ಜನತೆ ಮುಂದೆ ಬೇಶರತ್ ಕ್ಷಮೆಯಾಚಿಸಬೇಕು ಎಂದು ಹೇಳಿದರು. ಇನ್ನು, ಲಿಂಗಾಯತ ಸಿಎಂ ಯಾರು ಆಗಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಚುನಾವಣೆ ಆಗಲಿ ಮುಂದಿನ ಲಿಂಗಾಯತ ಸಿಎಂ ಬಗ್ಗೆ ನೋಡೋಣ ಎಂದರು. ಇದೇ ವೇಳೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ರಾಹುಲ್ ಗಾಂಧಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಪ್ರಧಾನಿ ಮೋದಿಯವರ ಮುಂದೆ ರಾಹುಲ್ ಗಾಂಧಿ ಏನೂ ಅಲ್ಲ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರ ಕುರಿತು ಮಾತನಾಡುವುದೇ ಹಾಸ್ಯಾಸ್ಪದ : ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯರ ಭ್ರಷ್ಟಾಚಾರ ಹೇಳಿಕೆಗೆ ಬೊಮ್ಮಾಯಿ ಪ್ರತಿಕ್ರಿಯೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಈಗಾಗಲೇ ಲಿಂಗಾಯತ ಮುಖ್ಯಮಂತ್ರಿ ಇದ್ದಾರೆ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ ಅವರು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಕಾಂಗ್ರೆಸ್. ಭ್ರಷ್ಟಾಚಾರದ ಅವಿಭಾಜ್ಯ ಅಂಗವಾದ ಕಾಂಗ್ರೆಸ್ ಭ್ರಷ್ಟಾಚಾರ ಕುರಿತು ಮಾತನಾಡುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಗಿ ಹೇಳಿದ್ದರು. ಹಾಗೆ ಸಿದ್ದರಾಮಯ್ಯ ಅವರಿಗೆ ನಾನು ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಒಂದು ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ ಎಂದು ಸವಾಲೆಸೆದಿದ್ದರು.

ಇದನ್ನೂ ಓದಿ: ನಮಗೆ ಹಣ ಬಲ ಇಲ್ಲ, ಜನ ಬಲ ಮಾತ್ರ ಇದೆ: ಹೆಚ್.ಡಿ. ದೇವೇಗೌಡ, ಅಮಿತ್​ ಶಾ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.