ETV Bharat / state

ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಮಹಿಳೆ ಆತ್ಮಹತ್ಯೆ

author img

By

Published : Aug 22, 2020, 11:52 AM IST

Suicide
Suicide

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ: ಸಾಲಬಾಧೆ ತಾಳಲಾರದೆ ರೈತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ನಡೆದಿದೆ.

24 ವರ್ಷದ ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶ್ವೇತಾ ಅವರ ಪತಿ ಮಹೇಶ್ವರಪ್ಪ ವಿವಿಧ ಬ್ಯಾಂಕ್ ಹಾಗೂ ಕೈಗಡವಾಗಿ ಸುಮಾರು 5 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಅದನ್ನು ವಾಪಸ್ ನೀಡುವುದು ಹೇಗೆ ಎಂಬ ಚಿಂತೆಯಲ್ಲಿದ್ದ ಶ್ವೇತಾ, ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೊನ್ನಾಳಿ ಸಿಪಿಐ ಟಿ.ವಿ.ದೇವರಾಜ್, ನ್ಯಾಮತಿ ತಹಶೀಲ್ದಾರ್ ತನುಜಾ ಟಿ. ಸವದತ್ತಿ, ಸಬ್ ಇನ್ಸ್​​ಪೆಕ್ಟರ್ ಹನುಮಂತಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.