ETV Bharat / state

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ

author img

By

Published : Mar 3, 2023, 1:17 PM IST

Updated : Mar 3, 2023, 2:25 PM IST

Lokayukta raids
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ದಾವಣಗೆರೆ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್​ಡಿಎಲ್‌) ರಾಸಾಯನಿಕ ಪೂರೈಸುವ ಟೆಂಡರ್ ನೀಡಲು 40 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ಪ್ರಶಾಂತ್‌ ಮಾಡಾಳ್‌ ಅವರನ್ನು ನಿನ್ನೆ(ಗುರುವಾರ) ಬಂಧಿಸಿದ್ದ ಲೋಕಾಯುಕ್ತ ಅಧಿಕಾರಿಗಳು ತಡರಾತ್ರಿ ಮಿಂಚಿನ ಕಾರ್ಯಾಚರಣೆ ಕೈಗೊಂಡಿದ್ದರು. ಇದೀಗ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನೇಶಪುರ (ಮಾಡಾಳ್ ವಿರೂಪಾಕ್ಷಪ್ಪ) ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾವೇರಿ, ದಾವಣಗೆರೆ, ಬೆಂಗಳೂರು ಮೂಲದ 20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಘಟಕದ ಪೊಲೀಸ್ ಆಧೀಕ್ಷಕರಾದ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮನೆಯಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. ಬೆಂಗಳೂರು ನೋಂದಣಿಯ ನಾಲ್ಕು ಸರ್ಕಾರಿ ವಾಹನಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ಶಾಸಕ ಮಾಡಳ್ ವಿರೂಪಾಕ್ಷಪ್ಪ ಅವರ ಮನೆಗೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. .

ಇದನ್ನೂ ಓದಿ: 40 ಲಕ್ಷ ರೂ ಲಂಚ ಪಡೆಯುವಾಗ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಅಧಿಕಾರಿಗಳು ಧಾವಿಸುತ್ತಿದ್ದಂತೆ ಇನ್ನು ಶಾಸಕರ ನಿವಾಸದ ಬಳಿ ಶಾಸಕರ ಬೆಂಬಲಗರು ಜಮಾಯಿಸಿದ್ರು. ಈಗಾಗಲೇ ಬೆಂಗಳೂರು ಜಲಮಂಡಳಿಯಲ್ಲಿ ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಮಾಡಾಳ್ ಹಾಗೂ ಕೆಎಸ್​ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್.ಎಂ. ಅವರ ಮನೆಯಲ್ಲಿ ತನಿಖಾಧಿಕಾರಿಗಳು‌ ಶೋಧ ತೀವ್ರಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಮತ್ತೆ 6 ಕೋಟಿ ರೂ. ಜಪ್ತಿಮಾಡಲಾಗಿದೆ. ಆದರೆ ಚೆನ್ನಗಿರಿ ತಾಲೂಕಿನ ಚೆನ್ನೇಶ್ವರ ಗ್ರಾಮದಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪನವರ ನಿವಾಸದಲ್ಲಿ ಶೋಧ ನಡೆಸಲಾಗುತ್ತಿದ್ದು, ಏನೆಲ್ಲ ಸಿಕ್ಕಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕಾಂಗ್ರೆಸ್ ನಾಯಕರ ಕುತಂತ್ರ: ಶಾಸಕ ಮಾಡಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿರುವುದರ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದು ಶಾಸಕರ ಹಿಂಬಾಲಕರು ಗಂಭೀರ ಆರೋಪ ಮಾಡಿದ್ದಾರೆ. ಈಗಾಗಲೇ ನಮ್ಮ ಶಾಸಕರನ್ನು ಪಕ್ಷಕ್ಕೆ ಅಹ್ವಾನ ಮಾಡಿದ್ದರು. ನಮ್ಮ ಶಾಸಕರು ಅವರ ಪಕ್ಷಕ್ಕೆ ಹೊಗಲಿಲ್ಲ ಎಂದಿದ್ದಕ್ಕೆ ಈ ರೀತಿಯ ಕುತಂತ್ರ ಮಾಡಿದ್ದಾರೆ ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಪ್ರಶಾಂತ್ 40 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ದಾಳಿಯ ಬಳಿಕ ಆರೋಪಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ, ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.

ಕಂತೆ ಕಂತೆ ಹಣ ಪತ್ತೆ: ಮಾಡಾಳ್ ವಿರುಪಾಕ್ಷಪ್ಪನವರ ಪುತ್ರನ ಮನೆಯಲ್ಲಿ ಕಂತೆ ಕಂತೆಯಂತೆ ಹಣ ಸಿಕ್ಕಿದೆ. ಬೆಂಗಳೂರು ಜಲಮಂಡಳಿಯಲ್ಲಿ ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಮಾಡಾಳ್ ಹಾಗೂ ಕೆಎಸ್​ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್.ಎಂ. ಅವರ ಮನೆಯಲ್ಲಿ ತನಿಖಾಧಿಕಾರಿಗಳು‌ ಶೋಧ ತೀವ್ರಗೊಳಿಸಿದ್ದರು. ಈ ಸಂದರ್ಭದಲ್ಲಿ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ರೂ. ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಪ್ರಶಾಂತ್‌ ಮಾಡಾಳ್ ನಿವಾಸದಲ್ಲಿ 6 ಕೋಟಿ ರೂಪಾಯಿ ಹಣ ಪತ್ತೆ!

Last Updated :Mar 3, 2023, 2:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.