ETV Bharat / state

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಭೈರತಿ ಬಸವರಾಜ್

author img

By

Published : Jun 28, 2021, 1:22 PM IST

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವುದರ ಬಗ್ಗೆ ನನಗೆ ಸ್ಪಷ್ಟ ಮಾಹಿತಿಯಿಲ್ಲ. ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರು ಆ ರೀತಿ ಮಾಡುವುದಿಲ್ಲ, ಅವರೊಂದಿಗೆ ನಾವು ಇರುತ್ತೇವೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

Statement of Minister Byrathi Basavaraj
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿಕೆ

ದಾವಣಗೆರೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗೆ ಜಿಲ್ಲಾ ಉಸ್ತುವಾರಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತೆರೆ ಎಳೆದಿದ್ದಾರೆ.

ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರುನಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರು ರಾಜೀನಾಮೆ ನೀಡಲ್ಲ, ಈ ಸಮಸ್ಯೆ ಮುಂದಿನ ದಿನಗಳಲ್ಲಿ ತಿಳಿಯಾಗುತ್ತದೆ. ಅವರು ರಾಜೀನಾಮೆ ನೀಡುತ್ತಾರೆ ಎನ್ನುವುದರ ಬಗ್ಗೆ ನನಗೆ ಸ್ಪಷ್ಟ ಮಾಹಿತಿಯಿಲ್ಲ. ಯಾವ ಕಾರಣಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎಂಬುದು ಸಹ ನನಗೆ ಗೊತ್ತಿಲ್ಲ. ಅವರು ಆ ರೀತಿ ಮಾಡುವುದಿಲ್ಲ, ಅವರೊಂದಿಗೆ ನಾವು ಇರುತ್ತೇವೆ ಎಂದಿದ್ದಾರೆ.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿಕೆ

ಶಾಲೆಗಳ ಪುನಾರಂಭದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಶಿಕ್ಷಣ ತಜ್ಞರೊಂದಿಗೆ ಚರ್ಚೆ ಮಾಡಿ ಸಾಧಕ-ಬಾಧಕಗಳನ್ನು ತಿಳಿದು ಶಾಲೆಗಳನ್ನು ತೆರೆಯಬೇಕಾ, ಬೇಡವಾ ಎಂಬುದರ ಬಗ್ಗೆ ನಿರ್ಧರಿಸಲಾಗುತ್ತದೆ. ಕೊರೊನಾ ಸಂಪೂರ್ಣವಾಗಿ ಕಡಿಮೆಯಾಗುವ ತನಕ ಶಾಲೆಗಳನ್ನು ತೆರೆಯಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕೊರೊನಾದಿಂದ ಮಕ್ಕಳು ಪೋಷಕರು ಆತಂಕದಲ್ಲಿದ್ದಾರೆ. ಹಾಗಾಗಿ ಇಂದು ಶಿಕ್ಷಣ ಸಚಿವರು ಸಭೆ ನಡೆಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : ಫಡ್ನವಿಸ್ ಭೇಟಿಗಾಗಿ ಇಂದು ಮತ್ತೆ ಮುಂಬೈಗೆ: ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ‌ ನಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.