ದಾವಣಗೆರೆ: ಹಳೆಯ ದ್ವೇಷಕ್ಕೆ 200 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು!

author img

By

Published : Jun 4, 2023, 8:15 AM IST

davanagere

ಹಳೆಯ ದ್ವೇಷಕ್ಕೆ ಮೂರು ವರ್ಷದ 200 ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ನಡೆದಿದೆ.

ಹಳೆಯ ದ್ವೇಷಕ್ಕೆ ಅಡಿಕೆ ಗಿಡಗಳು ನಾಶ!

ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶವಾಗಿವೆ. ದಾವಣಗೆರೆ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಳೆಯ ದ್ವೇಷವನ್ನೇ ಗುರಿಯಾಗಿಸಿಕೊಂಡ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ನಾಶಗೊಂಡ ಅಡಿಕೆ ತೋಟವು ರೈತ ಹಾಲೇಶಪ್ಪ ಎಂಬವರಿಗೆ ಸೇರಿದ್ದಾಗಿದ್ದು, ಸುಮಾರು 200 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ.

ಎರಡು ಎಕರೆ ಅಡಿಕೆ ತೋಟ ಮಾಡಿದ್ದ ಹಾಲೇಶಪ್ಪ ಬೆಳೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರು. ಮೂರು ವರ್ಷದ ಅಡಿಕೆ ಗಿಡಗಳು ದ್ವೇಷಕ್ಕೆ ಬಲಿಯಾಗಿರುವುದು ಹಾಲೇಶಪ್ಪ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಬೆಳೆ ನಾಶದ ಪರಿಹಾರಕ್ಕಾಗಿ ಅವರು ಕಾದುಕುಳಿತಿದ್ದು ಯಾವೊಬ್ಬ ಅಧಿಕಾರಿಯೂ ಅತ್ತ ಸುಳಿಯದೇ ಇರುವುದು ಅವರಲ್ಲಿ ಮತ್ತಷ್ಟು ಬೇಸರ ಮೂಡಿಸಿದೆ. ಈ ಕೃತ್ಯದಿಂದ ಮನ ನೊಂದಿರುವ ರೈತ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ರಾತ್ರೋ ರಾತ್ರಿ 200 ಅಡಿಕೆ ಗಿಡಗಳು ನಾಶ: ರೈತ ಹಾಲೇಶಪ್ಪ ತಮ್ಮ ಜಮೀನಿನಲ್ಲಿ ಎರಡು ವರ್ಷಗಳ ಹಿಂದೆ ಅಡಿಕೆ ಗಿಡಗಳನ್ನು ಹಾಕಿದ್ದರು. ಈಗಾಗಲೇ ಗಿಡಗಳು ಎದೆಯೆತ್ತರಕ್ಕೆ ಬೆಳೆದಿದ್ದವು. ಇದನ್ನು ಕಂಡ ಕೆಲ ಕಿಡಿಗೇಡಿಗಳು ಹಳೆಯ ದ್ವೇಷಕ್ಕೆ ಉತ್ತಮ ಫಸಲು ನೀಡಲು ತಯಾರಾಗಿದ್ದ ಅಡಿಕೆ ಗಿಡಗಳನ್ನೇ ರಾತ್ರೋ ರಾತ್ರಿ ಕಡಿದು ಹಾಕಿದ್ದಾರೆ. ಬೆಳಗ್ಗೆ ಹಾಲೇಶಪ್ಪನವರು ಜಮೀನಿಗೆ ಆಗಮಿಸಿದ್ದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಮಕ್ಕಳಂತೆ ಸಾಕಿದ್ದ ಗಿಡಗಳು ನೆಲಕ್ಕುರುಳಿರುವುದನ್ನು ಕಂಡು ಮಾಲೀಕ ಕಣ್ಣೀರು ಹಾಕಿದ್ದಾರೆ. ಕೂಡಲೇ ಅವರು ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಮತ್ತೊಂದು ಗ್ಯಾರಂಟಿ 10 ಕೆಜಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಆದೇಶ

ಶಿವಮೊಗ್ಗದಲ್ಲಿ ಮಳೆಯಿಂದ ಬೆಳೆ ನಾಶ: ಎರಡು ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಚಂದ್ರಗುತ್ತಿ ಸಮೀಪದ ಅಂಕರವಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿತ್ತು. ಈ ಮಳೆಗೆ ಅಬ್ದುಲ್ ಖಾದರ್ ಎಂಬುವವರಿಗೆ ಸೇರಿದ ಗ್ರಾಮದ ಸರ್ವೆ ನಂ. 81 ರಲ್ಲಿನ 4 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ನಾಶವಾಗಿದೆ. ಸಾಲ ಮಾಡಿ ಬೆಳೆದಿದ್ದ ಬೆಳೆ ಕೈ ಸೇರುವ ಮುನ್ನವೇ ಧರೆಗುರುಳಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇದು ಸುಮಾರು 5 ರಿಂದ 6 ಲಕ್ಷ ರೂಪಾಯಿಯ ನಷ್ಟ ಎಂದು ಅಂದಾಜಿಸಲಾಗಿದೆ.

ತೋಟದಲ್ಲಿ ಅಳವಡಿಸಿದ್ದ ಪೈಪ್​ ಲೈನ್​, ಸ್ಪ್ರಿಂಕ್ಲರ್‌ಗಳು ಹಾಗೂ ಅಡಕೆ ಗಿಡಗಳಿಗೂ ಹಾನಿಯಾಗಿದ್ದು, ಸುಮಾರು 20 ಕ್ಕೂ ಅಧಿಕ ಅಡಿಕೆ ಗಿಡಗಳು ಧರೆಗುಳಿದ್ದವು. ಸ್ಥಳಕ್ಕೆ ತೋಟಗಾರಿಕೆ ಇಲಾಖೆಯ ಅಧಿಕಾರಿ ಕೆ.ಆರ್.​ ದೊರೆರಾಜ್​ ಮತ್ತು ಕಂದಾಯ ಇಲಾಖೆಯ ಎಂ.ಎಸ್.​ ಯಶವಂತ ರಾಜ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು: ಬಿದ್ದು ಹೊರಳಾಡಿ ನ್ಯಾಯಕ್ಕೆ ಮೊರೆಯಿಟ್ಟ ರೈತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.