ತಲ್ಲಣಿಸಿದ ದಾವಣಗೆರೆ.. ಒಂದೇ ಕುಟುಂಬದ ಮೂವರ ಆತ್ಮಹತ್ಯೆ

author img

By

Published : Sep 20, 2021, 9:25 AM IST

Updated : Sep 20, 2021, 10:47 AM IST

ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ಶೇಖರಪ್ಪನಗರದಲ್ಲಿ ನಡೆದಿದೆ. ಮೃತರನ್ನು ಕೃಷ್ಣ ನಾಯ್ಕ್(44), ಸುಮಾ (32), ಧ್ರುವ (7) ಎಂದು ಗುರುತಿಸಲಾಗಿದೆ.

ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸ್ಥಳಕ್ಕೆ ಆರ್​ಎಂಸಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳಿಂದ ಸುಮಾ ಅನಾರೋಗ್ಯಕ್ಕೆ ತುತ್ತಾಗಿದ್ದಳಂತೆ. ಲಾರಿ ಚಾಲಕನಾಗಿದ್ದ ಕೃಷ್ಣ ನಾಯ್ಕ್, ಪತ್ನಿ ಗುಣಮುಖಳಾಗುವುದಕ್ಕೆ ಸಾಕಷ್ಟು ಹಣ ಖರ್ಚು ಮಾಡಿದ್ದನಂತೆ. ಆದರೂ ಆಕೆ ಚೇತರಿಸಿಕೊಂಡಿರಲಿಲ್ಲ. ಇದರಿಂದ ಮನನೊಂದು ಕುಟುಂಬ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿದೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪೊಲೀಸ್​ ತನಿಖೆ ಬಳಿಕವಷ್ಟೇ ಹೊರ ಬರಬೇಕಿದೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅರೆಸ್ಟ್: ಠಾಣೆ ಮುಂಭಾಗ ಕಾನೂನು ಕ್ರಮಕ್ಕೆ ಮುಂದಾದ ಸಾರ್ವಜನಿಕರು

Last Updated :Sep 20, 2021, 10:47 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.