ETV Bharat / state

ಲಾಕ್​ಡೌನ್ ಸಡಿಲಿಕೆ: ಖಾಸಗಿ ಚಿಕಿತ್ಸಾಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳು ಹೇಗಿವೆ?

author img

By

Published : Jul 4, 2020, 2:24 PM IST

ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರು, ಸ್ನೇಹಿತರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜೊತೆಗೆ ಸ್ಯಾನಿಟೈಸರ್​ನಲ್ಲಿ ಕೈ ತೊಳೆಯಬೇಕು.‌ ವಾರ್ಡ್​ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೆಚ್ಚು ಮಂದಿ ಬಂದು ಹೋಗುವಂತಿಲ್ಲ ಎಂಬ ನಿಬಂಧನೆಗಳಿವೆ.

private-hospitals
ಖಾಸಗಿ ಚಿಕಿತ್ಸಾಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮ

ದಾವಣಗೆರೆ: ಲಾಕ್​ಡೌನ್​ ಸಡಿಲಿಕೆಯಾದ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿದೆ.

ಚಿಕಿತ್ಸೆ ನೀಡುವ ವೈದ್ಯರು, ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವಾರ್ಡ್‌ಗೆ ಸ್ಯಾನಿಟೈಸ್‌ ಮಾಡುವುದು, ಒಂದು ವಾರ್ಡ್​ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಮತ್ತೊಂದು ವಾರ್ಡ್​ನಲ್ಲಿ ಕರ್ತವ್ಯ ನಿರ್ವಹಿಸುವಂತಿಲ್ಲ. ಹೀಗೆ ಹಲವಾರು ನಿಬಂಧನೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೆಲಸ ಆರಂಭಿಸಿವೆ.

ಖಾಸಗಿ ಚಿಕಿತ್ಸಾಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮ

ಹೊರ ರೋಗಿಗಳು ಹಾಗೂ ಒಳ ರೋಗಿಗಳ ವಿಭಾಗ ಆರಂಭ:

ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರು, ಸ್ನೇಹಿತರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜೊತೆಗೆ ಸ್ಯಾನಿಟೈಸರ್​ನಲ್ಲಿ ಕೈ ತೊಳೆಯಬೇಕು.‌ ವಾರ್ಡ್​ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೆಚ್ಚು ಮಂದಿ ಬಂದು ಹೋಗುವಂತಿಲ್ಲ ಎಂಬ ನಿಬಂಧನೆಗಳಿವೆ.

ಸ್ವಚ್ಛತೆಗೆ ಮೊದಲ ಆದ್ಯತೆ, ಪ್ರತಿನಿತ್ಯ ಸ್ಯಾನಿಟೈಸ್ :

ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ.‌ ಈ ನಿಟ್ಟಿನಲ್ಲಿ ನಿತ್ಯವೂ ವಾರ್ಡ್​ಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕೊರೊನಾ ಸೋಂಕಿನ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಲಾಗುತ್ತಿದೆ. ಹೃದಯ ಸಂಬಂಧಿ ಸೇರಿದಂತೆ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ವಿಶೇಷ ಆಸಕ್ತಿ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುತ್ತಾರೆ ಬಾಪೂಜಿ ಆಸ್ಪತ್ರೆಯ ಅನಸ್ತೇಷಿಯಾ ವಿಭಾಗದ ಮುಖ್ಯಸ್ಥರಾದ ಡಾ.ರವಿ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.