ETV Bharat / state

ಬಿಜೆಪಿ ಟಿಕೆಟ್​ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಮಾಡಾಳ್ ಪುತ್ರ ಮಲ್ಲಿಕಾರ್ಜುನ ಕಣಕ್ಕೆ?

author img

By

Published : Apr 5, 2023, 2:45 PM IST

ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಸಿಗದಿದ್ದರೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಲ್ಲಿಕಾರ್ಜುನ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

mla-madals-son-mallikarjuna-will-contest-as-an-independent-in-channagiri
ಬಿಜೆಪಿ ಟಿಕೆಟ್​ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಮಾಡಾಳ್ ಪುತ್ರ ಮಲ್ಲಿಕಾರ್ಜುನ ಕಣಕ್ಕೆ?

ದಾವಣಗೆರೆ: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲು ಸೇರಿದ ನಂತರ ತಂದೆಯ ಅನುಪಸ್ಥಿತಿಯಲ್ಲಿ ಪುತ್ರ ಮಾಡಾಳ್ ಮಲ್ಲಿಕಾರ್ಜುನ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿರುವ ಮಾಡಾಳ್ ಮಲ್ಲಿಕಾರ್ಜುನ ಬಿಜೆಪಿ ಟಿಕೆಟ್​ನ ಪ್ರಬಲ ಆಕಾಂಕ್ಷಿ. ಒಂದು ವೇಳೆ ಕಮಲ ಪಕ್ಷದ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಚಿಂತನೆಯಲ್ಲೂ ಮಲ್ಲಿಕಾರ್ಜನ ತೊಡಗಿದ್ದಾರೆ ಎಂಬ ಮಾತುಗಳಿವೆ.

ಇದನ್ನೂ ಓದಿ: ಆಕಾಂಕ್ಷಿಗಳ ಟಿಕೆಟ್ ನೀಡಲು ಕಾರ್ಯಕರ್ತರಿಂದ‌ ಅಭಿಪ್ರಾಯ ಸಂಗ್ರಹಿಸಿದ ಬಿಜೆಪಿ

ರಾಜ್ಯ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ ಆಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚುಟವಟಿಕೆಗಳು ಬಿರುಸುಗೊಂಡಿವೆ. ಚನ್ನಗಿರಿ ಮತ ಕ್ಷೇತ್ರದಲ್ಲೂ ಚುನಾವಣೆಯ ಕಾವು ಜೋರಾಗಿದೆ. ಅದರಲ್ಲೂ, ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರು ಜೈಲು ಪಾಲಾಗಿರುವ ವಿಷಯ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ ರಾಜಕೀಯ ಲೆಕ್ಕಾಚಾರಗಳು ಎಲ್ಲವನ್ನೂ ಬದಲಾಯಿಸಿವೆ.

ಆಡಳಿತಾರೂಢ ಪಕ್ಷದ ಶಾಸಕರಾದ ಮಾಡಾಳ್ ಚುನಾವಣಾ ಹೊಸ್ತಿನಲ್ಲೇ ಭ್ರಷ್ಟಾಚಾರದ ಆರೋಪ ಪ್ರಕರಣದ ಸುಳಿಯಲ್ಲಿ ಸಿಲುಕಿದ್ದಾರೆ. ಅಲ್ಲದೇ, ಪ್ರಕರಣದಲ್ಲಿ ಜೈಲು ಸೇರಿರುವುದು ಕ್ಷೇತ್ರದಲ್ಲಿ ಪಕ್ಷಕ್ಕೆ ಮುಜುಗರದ ಸನ್ನಿವೇಶ ತಂದೊಡ್ಡುವಂತಾಗಿದೆ. ಇದರ ನಡುವೆ ಪ್ರಸ್ತುತ ಚುನಾವಣೆಯಲ್ಲಿ ವಿರೂಪಾಕ್ಷಪ್ಪಗೆ ಪಕ್ಷದ ಟಿಕೆಟ್ ಬಹುತೇಕ ಕೈತಪ್ಪಬಹುದು ಎಂಬ ಮಾತುಗಳು ರಾಜ್ಯ ಬಿಜೆಪಿಯಲ್ಲಿ ಕೇಳಿಬರುತ್ತಿದೆ.

ಬಿಜೆಪಿ ಟಿಕೆಟ್​ ಮೇಲೆ ಮಾಡಾಳ್ ಪುತ್ರನ ಕಣ್ಣು: ಜೈಲಿನಲ್ಲಿರುವ ತಂದೆಗೆ ಪಕ್ಷದ ಟಿಕೆಟ್​ ಸಿಗುವುದು ಅನುಮಾನವಿರುವ ಕಾರಣ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅಖಾಡಕ್ಕೆ ಇಳಿದಿದ್ದಾರೆ. ಇದಕ್ಕೂ ಮೇಲಾಗಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ನ ಪ್ರಬಲ ಆಕಾಂಕ್ಷಿ ಕೂಡ ಆಗಿದ್ದಾರೆ. ಈಗಾಗಲೇ ಪಕ್ಷದ ಟಿಕೆಟ್ ಘೋಷಣೆಗಾಗಿ ಕಾದು ಕುಳಿತಿದ್ದಾರೆ.

ಇಷ್ಟೇ ಅಲ್ಲ, ಪಕ್ಷದ ಟಿಕೆಟ್​ ಪಡೆಯುವ ನಿಟ್ಟಿನಲ್ಲಿ ಮಾಡಾಳ್ ಮಲ್ಲಿಕಾರ್ಜುನ‌ ಅವರು ಕ್ಷೇತ್ರದಲ್ಲಿ ಕಸರತ್ತು ಆರಂಭಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಭೆಗಳನ್ನು ಮಾಡುವ ಮೂಲಕ ತಮ್ಮತ್ತ ಸೆಳೆಯುವ ಪ್ರಯತ್ನದಲ್ಲಿ ತೊಡಗಿದ್ಧಾರೆ. ಚನ್ನಗಿರಿ ತಾಲೂಕಿನ ಬಹುತೇಕ ಕಡೆ ಹತ್ತಾರು ಗುಂಪುಗಳನ್ನು ಮಾಡಿ ಪ್ರಚಾರ ಸಹ ಆರಂಭಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ - ಕಾಂಗ್ರೆಸ್​ನಲ್ಲಿ​ ಕುತೂಹಲ ಕೆರಳಿಸಿದ ಚನ್ನಗಿರಿ ಟಿಕೆಟ್... ಪೈಪೋಟಿ ಕಣವಾದ ಕ್ಷೇತ್ರ

ಇನ್ನೆರಡು ದಿನಗಳಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಮತ್ತ ಟಿಕೆಟ್ ಘೋಷಣೆ ಆಗುವ ಸಾಧ್ಯತೆ ಇದೆ. ಹೀಗಾಗಿಯೇ ಚನ್ನಗಿರಿ ಕ್ಷೇತ್ರದಲ್ಲಿ ಸಭೆಗಳ ಮೇಲೆ ಸಭೆ ಮಾಡುತ್ತಾ ಪಕ್ಷದ ವರಿಷ್ಠರ ಗಮನವನ್ನೂ ಸೆಳೆಯಲು ಮಲ್ಲಿಕಾರ್ಜುನ ಮುಂದಾಗಿದ್ದಾರೆ. ಸಭೆಗಳಲ್ಲಿ ಕೆಲ ಮುಖಂಡರು ಕೂಡ ಮಲ್ಲಿಕಾರ್ಜುನ ಪರ ಧ್ವನಿ ಎತ್ತಲು ಆರಂಭಿಸಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ?: ಬಿಜೆಪಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಮಾಡಾಳ್ ಮಲ್ಲಿಕಾರ್ಜುನ ಓಡಾಟ ನಡೆಸುತ್ತಿದ್ದಾರೆ. ಒಂದು ವೇಳೆ, ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಡಾಳ್ ಮಲ್ಲಿಕಾರ್ಜುನ ಸಿದ್ದತೆ ನಡೆಸುತ್ತಿದ್ದಾರೆ ಎಂಬ ಮಾತುಗಳು ಸಹ ಬೆಂಬಲಿಗರಿಂದ‌ ಕೇಳಿ ಬರುತ್ತಿದೆ. ಬಿಜೆಪಿ ವರಿಷ್ಠರು ಟಿಕೆಟ್ ಮಲ್ಲಿಕಾರ್ಜುನ ಅವರಿಗೆ ಟಿಕೆಟ್​ ಕೊಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ತೀವ್ರ ಸ್ವರೂಪ‌ ಪಡೆದ ಟಿಕೆಟ್ ಹಂಚಿಕೆ‌ ವಿಚಾರ: ದಿಢೀರ್ ಸಭೆ ಕರೆದ ಮಾಡಾಳ್ ಮಲ್ಲಿಕಾರ್ಜುನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.