ETV Bharat / state

ಪ್ರತಿ ಗ್ರಾಮ ಪಂಚಾಯತಿಗೆ 20 ಲಕ್ಷ ರೂ ಬಿಡುಗಡೆ: ಕೆ.ಎಸ್.ಈಶ್ವರಪ್ಪ

author img

By

Published : Nov 29, 2019, 11:54 AM IST

185 ಗ್ರಾಮ ಪಂಚಾಯತ್​ ಪಿಡಿಒ ಮತ್ತು ಗ್ರಾಂ. ಪಂ. ಅಧ್ಯಕ್ಷರಿಗೆ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಬಗ್ಗೆ ತರಬೇತಿ ನೀಡಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕೆ.ಎಸ್.ಈಶ್ವರಪ್ಪ , KS Eeswarappa
ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ಯ ಇಲಾಖೆಯಲ್ಲಿ ಪ್ರಮುಖ ಎರಡು ಯೋಜನೆಗಳಿಗೆ ಒತ್ತು ನೀಡಲಾಗಿದೆ. ಅದರಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕಾರ್ಯಕ್ಕೂ ಮುಂದಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 20 ಲಕ್ಷ ರೂ ಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಬೀದರ್ ಜಿಲ್ಲೆಯನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. 185 ಗ್ರಾಮ ಪಂಚಾಯತ್​ ಪಿಡಿಒ ಮತ್ತು ಗ್ರಾಂ. ಪಂ. ಅಧ್ಯಕ್ಷರಿಗೆ ತರಬೇತಿ ನೀಡಲಾಗುವುದು. ನಂತರ ಹಂತ ಹಂತವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ ಅವರು, ರಾಜ್ಯದ 6023 ಗ್ರಾಮಗಳಲ್ಲಿ ಸೋಲಾರ್ ವಿದ್ಯುತ್ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಲಾಗುವುದು‌ ಎಂದು ಹೇಳಿದರು.

ಕೆ.ಎಸ್.ಈಶ್ವರಪ್ಪ

ಡಾಟಾ ಆಪರೇಟರ್ ನೇಮಕಾತಿ:
ಗ್ರಾಮ ಪಂಚಾಯತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್​ಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು. ಇದರ ಬಗ್ಗೆ ಪಿಡಿಒ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗುವುದು. ಅಲ್ಲದೇ ಪಿಡಿಒ ಕಚೇರಿಗೆ ಗೈರಾದ ಹಿನ್ನೆಲೆ ಕುಂಟು ನೆಪ ಹೇಳಿದರೆ ಅದನ್ನು ಪರಿಗಣಿಸುವುದಿಲ್ಲ. ಇದು ರಾಜ್ಯದ ಪಿಡಿಒಗಳಿಗೆ ಮೊದಲ ಎಚ್ಚರಿಕೆ ಎಂದರು.

Intro:ಹುಬ್ಬಳ್ಳಿ-02

ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಿರುವುದು ಸರಿಯಲ್ಲ. ಇದೊಂದು ಸುಳ್ಳು ಘೋಷಣೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆಯಲ್ಲಿ ಪ್ರಮುಖ ಎರಡು ಯೋಜನೆಗಳಿಗೆ ಒತ್ತು ನೀಡಲು ನಿರ್ಧರಿಸಲಾಗಿದ್ದು, ಅದರಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆಗೂ ಹೆಚ್ಚು ಒತ್ತು ನೀಡಲು ತಿರ್ಮಾನಿಸಲಾಗಿದೆ‌. ಈ ಹಿನ್ನಲೆಯಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 20 ಲಕ್ಷ ರೂ ಬಿಡುಗಡೆ ಮಾಡಲಾಗುವುದು. ಈಗಾಗಲೇ ಹೊಸಪೇಟೆ ಸಮೀಪದ ಹುಲಗಿ ಗ್ರಾಮದಲ್ಲಿ 8 ಗ್ರಾಂ ಪಂ ಸೇರಿಕೊಂಡು ತರಬೇತಿ ನೀಡಲಾಗುತ್ತಿದ್ದು, ಅದರಂತೆ ಪ್ರಾಯೋಗಿಕವಾಗಿ ಬೀದರ್ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದ್ದು, 185 ಗ್ರಾಮ ಪಂಚಾಯತ ಪಿಡಿಓ ಮತ್ತು ಗ್ರಾಂ ಪಂ ಅಧ್ಯಕ್ಷರಿಗೆ ತರಬೇತಿ ನೀಡಲಾಗುವುದು. ನಂತರ ಹಂತ ಹಂತವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದರು.

*ಡಾಟಾ ಆಪರೇಟರ್ ನೇಮಕ ಹಂತ ಹಂತದಲ್ಲಿ:* ರಾಜ್ಯದ 6023 ಗ್ರಾಮಗಳಲ್ಲಿ ಸೋಲಾರ್ ವಿದ್ಯುತ್ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಲಾಗುವುದು‌, ಅಲ್ಲದೇ ಗ್ರಾಮ ಪಂಚಾಯತಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ಇದರ ಬಗ್ಗೆ ಪಿಡಿಓ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಕಟ್ಟುನಿಟ್ಟಿನ ಕ್ರ‌ಮ ತೆಗೆದುಕೊಳ್ಳಲು ಸೂಚಿಸಲಾಗುವುದು. ಅಲ್ಲದೇ ಪಿಡಿಓ ಕಚೇರಿಗೆ ಗೈರಾದ ಹಿನ್ನೆಲೆಯಲ್ಲಿ ಕುಂಟು ನೆಪ ಹೇಳಿದರೆ ನಡೆಯುವುದಿಲ್ಲ. ಇದು ರಾಜ್ಯದ ಪಿಡಿಓಗಳಿಗೆ ಮೊದಲ ಎಚ್ಚರಿಕೆ ಎಂದರು.

ಬೈಟ್- ಕೆ ಎಸ್ ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಸಚಿವBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.