ETV Bharat / state

ಚುನಾವಣಾ ಕರ್ತವ್ಯಲೋಪ ಆರೋಪ: ಮತಗಟ್ಟೆ ಅಧಿಕಾರಿ ನವೀನ್​ ಸೂರ್ಯವಂಶಿ ಅಮಾನತು

author img

By

Published : Apr 11, 2023, 1:42 PM IST

ರಾಜ್ಯದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಕೆಲಸಗಳನ್ನು ನಿರ್ವಹಿಸುವಲ್ಲಿ ಕರ್ತವ್ಯಲೋಪ ಎಸಗಿರುವ ಅಧಿಕಾರಿ.

Dharwada
ಧಾರವಾಡ

ಧಾರವಾಡ: 72- ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಭಾಗ ಸಂಖ್ಯೆ 94 ರ ಮತಗಟ್ಟೆ ಅಧಿಕಾರಿಯಾಗಿದ್ದ ನವೀನ್ ಡಿ. ಸೂರ್ಯವಂಶಿ ಅವರು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರಿ, ಕಾರ್ಯ ಲೋಪ ಎಸಗಿರುವ ಆರೋಪದಡಿ ತಕ್ಷಣ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಆದೇಶ ಹೊರಡಿಸಿದ್ದಾರೆ.

ನವೀನ್ ಸೂರ್ಯವಂಶಿ ಅವರು 2023 ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡಿದ್ದಲ್ಲದೇ, ಸಕಾಲಕ್ಕೆ ಮಾಹಿತಿ, ದಾಖಲೆಗಳನ್ನು ನೀಡದೇ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 134 ಉಲ್ಲಂಘನೆ ಮಾಡಿದ್ದರಿಂದ ಅವರನ್ನು ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.

ಅಮಾನತು ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹರಿದ್ದು, ತಮ್ಮ ಕಚೇರಿ ಮುಖ್ಯಸ್ಥರ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಡಿಸಿ ಗುರುದತ್ತ ಹೆಗಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ತವ್ಯ ಲೋಪ: ಮತಗಟ್ಟೆ ಮಟ್ಟದ ಅಧಿಕಾರಿ ಅಮಾನತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.