ETV Bharat / state

ಹುಬ್ಬಳ್ಳಿಗೆ ಚಾಣಕ್ಯ ಅಮಿತ್ ಶಾ ಆಗಮನ: ಬಿಗಿ ಬಂದೋಬಸ್ತ್

author img

By

Published : Feb 23, 2023, 2:26 PM IST

Updated : Feb 23, 2023, 2:48 PM IST

ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಸಚಿವ ಅಮಿತ್​ ಶಾ - ಹುಬ್ಬಳ್ಳಿಗೆ ಬಂದಿಳಿದ ಚುನಾವಣಾ ಚಾಣಕ್ಯ - ವಿಶೇಷ ಗೌರವ ಸೂಚಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತ ಮಾಡಿದ ವಾಣಿಜ್ಯ ನಗರಿ ಹುಬ್ಬಳ್ಳಿ

Amit Shah arrives at Hubli airport in Karnataka
Amit Shah arrives at Hubli airport in Karnataka

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು. ಬಳ್ಳಾರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಭೇಟಿಯಾಗಲು ಸ್ಥಳೀಯ ನಾಯಕರ ದಂಡು ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಅಮಿತ್​​ ಶಾ ಆಗಮನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ತೆರಳಿದರು. ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದೇ ವೇಳೆ ವಿಶೇಷ ಗೌರವ ಸೂಚಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

Amit Shah arrives in Hubli
ಹುಬ್ಬಳ್ಳಿಗೆ ಚಾಣಕ್ಯ ಅಮಿತ್ ಶಾ ಆಗಮನ

ಅಮಿತ್ ಶಾ ಅವರನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ಹಾಗೂ ಪೊಲೀಸ್ ಆಯುಕ್ತರಾದ ರಮಣ ಗುಪ್ತಾ ಸರ್ಕಾರಿ ಗೌರವದೊಂದಿಗೆ ಸ್ವಾಗತಿಸಿದರು.

ಇದನ್ನೂ ಓದಿ: ನನ್ನ ಸ್ಪರ್ಧೆ ನಿರ್ಧಾರ ಮಾಡೋಕೆ ಅವರ್ಯಾರು?: ಬಿಎಸ್​ವೈ ವಿರುದ್ಧ ಸಿದ್ದರಾಮಯ್ಯ ಗರಂ

ಧರ್ಮೇಂದ್ರ ಪ್ರಧಾನ್ ಆಗಮನ : ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಕೂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಉತ್ತಮ ಸಂಘಟನೆಯನ್ನು ಹೊಂದಿದೆ. ರೈತರು, ಮಹಿಳೆಯರು, ಎಸ್‍ಸಿ, ಎಸ್‍ಟಿ ಹಾಗೂ ಒಬಿಸಿ ಸಮುದಾಯದ ಅಭಿವೃದ್ಧಿ, ಕರಾವಳಿ ಪ್ರದೇಶ ಸೇರಿ ರಾಜ್ಯದ ಅಭಿವೃದ್ಧಿಗೆ ಮಾಡಿದ ಕೆಲಸಗಳು ಮಾತ್ರವಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ನಮ್ಮ ಗೆಲುವು ಸುಲಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ರಾಜ್ಯಕ್ಕೆ ಆಗಮಿಸಿದ ಕೇಂದ್ರ ಸಚಿವರು & ಕರ್ನಾಟಕದ ಚುನಾವಣಾ ಉಸ್ತುವಾರಿಗಳಾದ ಶ್ರೀ @dpradhanbjp, ಕೇಂದ್ರ ಸಚಿವರು & ಕರ್ನಾಟಕದ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ @mansukhmandviya & ತಮಿಳುನಾಡು ರಾಜ್ಯಾಧ್ಯಕ್ಷರು & ಕರ್ನಾಟಕ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ @annamalai_k ಅವರನ್ನು ರಾಜ್ಯ ಪದಾಧಿಕಾರಿಗಳು ಸ್ವಾಗತಿಸಿದರು. pic.twitter.com/ryaDmqYqJ0

    — BJP Karnataka (@BJP4Karnataka) February 23, 2023 " class="align-text-top noRightClick twitterSection" data=" ">

ಕರ್ನಾಟಕ ರಾಜ್ಯವು ಹಲವು ದಶಕಗಳಿಂದ ಬಿಜೆಪಿ ಭದ್ರಕೋಟೆ ಆಗಿದೆ. ಇಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಮೋದಿ ಅವರ ಸರ್ಕಾರ, ಯಡಿಯೂರಪ್ಪ - ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾಡಿದ ಸಾಧನೆಯ ಹಿನ್ನೆಲೆ ನಮಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಕೆಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇನ್ನಷ್ಟು ಸಲ ಬರಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಅವರೆಲ್ಲರೂ ಪಕ್ಷಕ್ಕಾಗಿ ಪ್ರಚಾರ ಮಾಡಲಿದ್ದಾರೆ. ಶೀಘ್ರದಲ್ಲೇ ಪ್ರಚಾರ ಯಾತ್ರೆಗಳನ್ನು ಆರಂಭಿಸಲಾಗುತ್ತದೆ. ಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯದ ಹಿರಿಯ ನಾಯಕರು ಭಾಗವಹಿಸಿ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಸಹ ಉಸ್ತುವಾರಿ ಮನ್‍ಸುಖ್ ಮಾಂಡವೀಯ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ, ಸಂಸದ ಪಿ.ಸಿ. ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಮುಖ್ಯ ವಕ್ತಾರ ಮಹೇಶ್ ಎಂ.ಜಿ ಅವರು ಹಾಜರಿದ್ದರು.

Last Updated : Feb 23, 2023, 2:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.