ಭಕ್ತರ ಸೋಗಿನಲ್ಲಿ ಬಂದ್ರು, ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಇರಿದ್ರು.. ಚಂದ್ರಶೇಖರ್​ ಗುರೂಜಿ ಕೊಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

author img

By

Published : Jul 5, 2022, 2:36 PM IST

Updated : Jul 5, 2022, 4:24 PM IST

Chandrashekhar Guruji murder captured in CCtv, Astrologer Chandrashekhar Guruji murder, Astrologer Chandrashekhar Guruji murder in Hubli, Astrologer Chandrashekhar Guruji murder news, Vastu expert Chandrashekhar Guruji died news, ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ, ಹುಬ್ಬಳ್ಳಿಯಲ್ಲಿ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ, ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಸುದ್ದಿ,

ಭಕ್ತರ ಸೋಗಿನಲ್ಲಿ ಬಂದು ಕಾಲಿಗೆರಗಿದ ಕಿರಾತಕರು-ಚಂದ್ರಶೇಖರ್​ ಗುರೂಜಿಗೆ ದಿಢೀರ್​ ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಇರಿದು ಕೊಲೆ- ದುಷ್ಕರ್ಮಿಗಳ ಅಟ್ಟಹಾಸ ಹೋಟೆಲ್​ನ ಸಿಸಿಟಿವಿಯಲ್ಲಿ ಸೆರೆ

ಹುಬ್ಬಳ್ಳಿ: ಸರಳವಾಸ್ತು ಸಂಸ್ಥಾಪಕ ಹಾಗೂ ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ನಗರದ ಉಣಕಲ್ ಬಳಿಯ ಖಾಸಗಿ ಹೋಟೆಲ್​ನಲ್ಲಿ ಕಗ್ಗೊಲೆ ಮಾಡಲಾಗಿದೆ. ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಇಂದು ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಖಾಸಗಿ ಹೋಟೆಲ್​ನ ರಿಸೆಪ್ಷನ್​ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳ ಚಲನವಲನ ಸಿಸಿಟಿವಿಯಲ್ಲಿ ದಾಖಲಾಗಿದೆ.

ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಮೊದಲು ಕಾಲಿಗೆ ನಮಸ್ಕರಿಸಿ ಬಳಿಕ ಚಾಕುವಿನಿಂದ ಅನೇಕ ಬಾರಿ ಇರಿದಿದ್ದಾರೆ. ಹೊಟ್ಟೆ ಹಾಗೂ ಎದೆಯ ಭಾಗಕ್ಕೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿದ್ದಾರೆ. ಗುರೂಜಿಯವರು ರಕ್ತದ ಮಡುವಿನಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.

ಸಿಸಿಟಿವಿಯಲ್ಲಿ ಚಂದ್ರಶೇಖರ್​ ಗುರೂಜಿ ಕೊಲೆ ದೃಶ್ಯ ಸೆರೆ

ಓದಿ: ಬಂಟ್ವಾಳದಲ್ಲಿ ಬೈಕ್​ ಹಾರನ್​ ವಿಚಾರವಾಗಿ ಯುವಕನ ಹತ್ಯೆ: ಆರೋಪಿಗಳಿಬ್ಬರ ಬಂಧನ

ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪೊಲೀಸ್​ ಕಮಿಷನರ್ ಲಾಭೂರಾಮ್, ಡಿಸಿಪಿ ಸಾಹಿಲ್ ಬಾಗ್ಲಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃತ್ಯ ಎಸಗಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.

Chandrashekhar Guruji murder captured in CCtv, Astrologer Chandrashekhar Guruji murder, Astrologer Chandrashekhar Guruji murder in Hubli, Astrologer Chandrashekhar Guruji murder news, Vastu expert Chandrashekhar Guruji died news, ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ, ಹುಬ್ಬಳ್ಳಿಯಲ್ಲಿ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ, ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಸುದ್ದಿ,
ಪರಾರಿಯಾದ ಆರೋಪಿಗಳು
ಚಂದ್ರಶೇಖರ್​ ಗುರೂಜಿ
ಚಂದ್ರಶೇಖರ್​ ಗುರೂಜಿ
Last Updated :Jul 5, 2022, 4:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.