ETV Bharat / state

ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

author img

By

Published : Jun 29, 2021, 2:41 PM IST

ಬೆಳಗಾವಿಯಲ್ಲಿ ಎರಡು ವರ್ಷಗಳ ಹಿಂದೆಯೇ ಅಧಿವೇಶನ ಮಾಡಲಾಗಿದೆ. ಅಲ್ಲದೇ ಬೆಳಗಾವಿಯವರಾದ ಮಾಂತೇಶ್ ಕವಟಗಿಮಠ ಅವರು ಕೂಡ ವಿಶೇಷವಾಗಿ ಅಧಿವೇಶನ ಕರೆಯುವ ವ್ಯವಸ್ಥೆ ಮಾಡಬೇಕೆಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರಣಗಳಿಂದ ಬೆಳಗಾವಿಯಲ್ಲಿ ಅಧಿವೇಶನ ಮಾಡುವುದು ಸೂಕ್ತ..

Basavaraja Horatti writes letter to CM to conduct session in Belgaum
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ

ಹುಬ್ಬಳ್ಳಿ : ಮುಂಬರುವ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಈ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಸರ್ಕಾರ ತೀರ್ಮಾನ ಮಾಡಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಸರ್ವೇಸಾಮಾನ್ಯವಾಗಿ ಜೂನ್‌ನಲ್ಲಿ ಮಾಡಬಹುದು. ಆದರೆ, ಈವರೆಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ, ಜುಲೈನಲ್ಲಿ ಆದರೂ ಅಧಿವೇಶನ ಮಾಡಬೇಕು.

ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ ನಡೆಯಬೇಕು ಅಂತಾರೆ ಸಭಾಪತಿ ಹೊರಟ್ಟಿ..

ಇನ್ನು, ಬೆಳಗಾವಿಯಲ್ಲಿ ಎರಡು ವರ್ಷಗಳ ಹಿಂದೆಯೇ ಅಧಿವೇಶನ ಮಾಡಲಾಗಿದೆ. ಅಲ್ಲದೇ ಬೆಳಗಾವಿಯವರಾದ ಮಾಂತೇಶ್ ಕವಟಗಿಮಠ ಅವರು ಕೂಡ ವಿಶೇಷವಾಗಿ ಅಧಿವೇಶನ ಕರೆಯುವ ವ್ಯವಸ್ಥೆ ಮಾಡಬೇಕೆಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರಣಗಳಿಂದ ಬೆಳಗಾವಿಯಲ್ಲಿ ಅಧಿವೇಶನ ಮಾಡುವುದು ಸೂಕ್ತ ಎಂದರು.

ಈ ಬಗ್ಗೆ ಸಭಾಧ್ಯಕ್ಷರು ಮತ್ತು ನಾನು ಕೂಡ ಒಮ್ಮತ ಸೂಚಿಸಿದ್ದೇನೆ. ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ಮಾಡುವ ಬಗ್ಗೆ ತೀರ್ಮಾನ ಮಾಡಬೇಕೆಂದರು. ಇನ್ನು, ಶಾಲಾ-ಕಾಲೇಜುಗಳ ಶುಲ್ಕ ವಿಚಾರವಾಗಿ ಸರ್ಕಾರ ಎಬಿಸಿಡಿ ಎಂದು ಮಾಡಬೇಕು. ಈ ಬಗ್ಗೆ ಸರ್ಕಾರ ಮತ್ತು ಅಧಿಕಾರಿಗಳು ಕುರಿತು ಚರ್ಚೆ ನಡೆಸಿ ಮಾರ್ಗಸೂಚಿಗಳನ್ನು ಹೊರಡಿಸಿ ಸಮಸ್ಯೆ ಬಗೆಹರಿಸಬೇಕೆಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.