ETV Bharat / state

ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿಗೆ ಪೌರ ಸನ್ಮಾನ: ಮೇಯರ್ ಈರೇಶ ಅಂಚಟಗೇರಿ

author img

By

Published : Sep 18, 2022, 7:38 PM IST

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ. 26 ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಕರ್ನಾಟಕ ಜಿಮಖಾನ್ ಮೈದಾನದಲ್ಲಿ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಅವರು ಹೇಳಿದರು.

ಮೇಯರ್ ಈರೇಶ ಅಂಚಟಗೇರಿ
ಮೇಯರ್ ಈರೇಶ ಅಂಚಟಗೇರಿ

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ. 26 ರಂದು ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, ಮಹಾನಗರ ಪಾಲಿಕೆ ವತಿಯಿಂದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಹೇಳಿದರು.

ನಗರದಲ್ಲಿ ಪಾಲಿಕೆ ಸಭಾಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ದೇಶಪಾಂಡೆ ನಗರದ ಕರ್ನಾಟಕ ಜಿಮಖಾನ್ ಮೈದಾನದಲ್ಲಿ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಅರವಿಂದ್ ಬೆಲ್ಲದ್, ಅಮೃತ ದೇಸಾಯಿ, ಪ್ರಸಾದ್ ಅಬ್ಬಯ್ಯ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ಮೇಯರ್ ಈರೇಶ ಅಂಚಟಗೇರಿ ಅವರು ಮಾತನಾಡಿದರು

ಇನ್ನು, ಅಂದಿನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲ ಪ್ರಮುಖರಿಗೂ ಆಹ್ವಾನಿಸಲಾಗುವುದು ಎಂದ ಅವರು ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು.

ಮಾಧ್ಯಮಗೋಷ್ಟಿ ಉಪ ಮೇಯರ್ ಉಮಾ ಮುಕುಂದ, ವಿರೋಧ ಪಕ್ಷದ ನಾಯಕ ದೊರಾಜ್ ಮಣಿಕುಂಟ್ಲ, ವೀರಣ್ಣ ಸವಡಿ, ಶಿವು ಮೆಣಸಿನಕಾಯಿ, ಸಂತೋಷ ಚೌಹಾಣ್​​ ಸೇರಿದಂತೆ ಉಪಸ್ಥಿತರಿದ್ದರು.

ಓದಿ: ವಿಮ್ಸ್​ನ ಐಸಿಯುನಲ್ಲಿ ಸಾವು ಪ್ರಕರಣ.. ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ, ಪರಿಶೀಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.