ETV Bharat / state

ನಮ್ಮದು 224 ಕ್ಷೇತ್ರಗಳ ಜನಾಭಿಪ್ರಾಯದ ಪ್ರಜಾ ಪ್ರಣಾಳಿಕೆ: ಸಿಎಂ ಬೊಮ್ಮಾಯಿ

author img

By

Published : May 1, 2023, 10:45 AM IST

cm
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಇಂದು ಪ್ರಣಾಳಿಕೆ ಬಿಡುಗಡೆ ಮಾಡಲಿದೆ.

ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಮತದಾರರನ್ನು ಸೆಳೆಯಲು ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

ಹುಬ್ಬಳ್ಳಿಯಲ್ಲಿಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, "ಇವತ್ತು ನಮ್ಮ ರಾಷ್ಟ್ರೀಯ ಅಧ್ಯಕ್ಷರು ಒಳ್ಳೆಯ ಪ್ರಣಾಳಿಕೆ ಬಿಡುಗಡೆ ಮಾಡುತ್ತಾರೆ. ಪ್ರಣಾಳಿಕೆಗಾಗಿ 224 ಕ್ಷೇತ್ರದ ಜನರ, ಪರಿಣಿತರ ಅಭಿಪ್ರಾಯ ಪಡೆಯಲಾಗಿದೆ. ಇದು ಜನಪರ, ಪ್ರಜಾ ಪ್ರಣಾಳಿಕೆ ಆಗಿರಲಿದೆ" ಎಂದರು. "ಜನರಿಗೆ ಏನೆಲ್ಲ ಒಳ್ಳೆಯದನ್ನು ಮಾಡಲು ಸಾಧ್ಯ, ಜನಕಲ್ಯಾಣಕ್ಕಾಗಿ ಏನೇನು ಮಾಡಬೇಕೋ ಅದನ್ನು ಮಾಡುವ ಪ್ರಯತ್ನ ಮಾಡ್ತಿದ್ದೇವೆ" ಎಂದು ತಿಳಿಸಿದರು.

ಜೆ.ಪಿ.ನಡ್ಡಾರಿ ಪ್ರಣಾಳಿಕೆ ಬಿಡುಗಡೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಗರದ ಖಾಸಗಿ ಹೋಟೆಲ್​ನಲ್ಲಿ ಕಾರ್ಯಕ್ರಮದ ನಂತರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಡಾ.ಕೆ.ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ: ಜೆ ಪಿ ನಡ್ಡಾರಿಂದ ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.