ETV Bharat / state

ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡನ ವಿರುದ್ಧ ಮಹಿಳೆಯಿಂದ ಪೊಲೀಸರಿಗೆ ದೂರು

author img

By

Published : Sep 12, 2021, 3:30 PM IST

ಧಾರವಾಡದ ಜೆಡಿಎಸ್ ಮುಖಂಡರೊಬ್ಬರು ರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Complaint registered against jds leader for assaulting women on road
ನಡುರಸ್ತೆಯಲ್ಲಿ ಮಹಿಳೆಯ ಎಳೆದಾಡಿದ ಜೆಡಿಎಸ್ ಮುಖಂಡ.

ಧಾರವಾಡ: ನಡುರಸ್ತೆಯಲ್ಲಿ ಜೆಡಿಎಸ್ ಮುಖಂಡ ಮಹಿಳೆಯೋರ್ವರ ಕೈಹಿಡಿದು ಎಳೆದಾಡಿರುವ ಘಟನೆ ಸತ್ತೂರಿನ ಎಸ್‌ಡಿಎಂ ದಂತ ವೈದ್ಯಕೀಯ ಕಾಲೇಜು ಬಳಿ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಪರಿಚಯಸ್ತ ಮಹಿಳೆ ಹಾಗು ಜೆಡಿಎಸ್ ಮುಖಂಡನ ನಡುವೆ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಮತ್ತೆ ರಸ್ತೆಯಲ್ಲಿ ಗಲಾಟೆ ಮಾಡಿಕೊಂಡು ಎಳೆದಾಡಿದ್ದಾರೆ ಎಂಬ ಮಾಹಿತಿ ಇದೆ.

ರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ- ವಿಡಿಯೋ

ಪೊಲೀಸರು ಐಪಿಸಿ ಸೆಕ್ಷನ್ 354ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಾಜಿ ಪ್ರಿಯಕರನಿಂದ ಪದೇ ಪದೆ ಫೋನ್ ಕಾಲ್​​.. ಮನನೊಂದ ಗೃಹಿಣಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.