ETV Bharat / state

ಪಕ್ಷ ಸಂಘಟನೆಗೆ ಒತ್ತು: ವಿಭಾಗೀಯ ಮಟ್ಟದ ಸಭೆ ನಡೆಸಿದ ಕಾಂಗ್ರೆಸ್​

author img

By

Published : Jul 30, 2021, 8:51 AM IST

ಕಾಂಗ್ರೆಸ್ ಪಕ್ಷದ ಸಂಘಟನೆಗೆ ಒತ್ತು ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಾಯಕರು ಹಾವೇರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ವಿಭಾಗೀಯ ಮಟ್ಟದ ಸಭೆ ನಡೆಸಿದರು.

congress
ಕಾಂಗ್ರೆಸ್​

ಹುಬ್ಬಳ್ಳಿ: ಪಕ್ಷ ಸಂಘಟನೆಯ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಹಾವೇರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ವಿಭಾಗೀಯ ಮಟ್ಟದ ಸಭೆ ನಡೆಸಿದರು. ಇಲ್ಲಿನ ಗೋಕುಲ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ಕಾರ್ಯಕ್ರಮ ನಡೆಯಿತು.

ಒಂದೆಡೆ ಬಿಜೆಪಿಯಲ್ಲಿ ಯಡಿಯೂರಪ್ಪ ಯುಗಾಂತ್ಯಗೊಂಡು ಮುಂದೇನು ಎಂಬ ಪ್ರಶ್ನೆ ಮೂಡಿರುವಾಗಲೇ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಲು ಮುಂದಾಗಿದೆ. ಈ ದೃಷ್ಟಿಯಿಂದ ಇಂದು ನಡೆದ ಸಭೆಯಲ್ಲಿ ಜಿಪಂ, ತಾಪಂ, ವಿಧಾನ ಪರಿಷತ್ ಚುನಾವಣೆಗಳ ಜೊತೆಗೆ ಸಿಂದಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.