ETV Bharat / state

35 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿಯ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ : ಸಚಿವ ಭೈರತಿ ಬಸವರಾಜ್

author img

By

Published : Jul 12, 2021, 3:18 PM IST

ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ ಯೋಜನೆಡಿ ನಿರ್ಮಾಣವಾಗುತ್ತಿದೆ. 18 ತಿಂಗಳಲ್ಲಿ ಪೂರ್ಣಗೊಳಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ..

Construction of Hubli-Hi-Tech Bus Stand
ಹಳೇ ಬಸ್ ನಿಲ್ದಾಣದ ಪುನರ್ ನಿರ್ಮಾಣ ಯೋಜನೆಯ ಶಂಕುಸ್ಥಾಪನೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಅನುದಾನದಡಿ ನೂತನವಾಗಿ ನಿರ್ಮಾಣವಾಗುತ್ತಿರುವ ಹಳೇ ಬಸ್ ನಿಲ್ದಾಣದ ಪುನರ್ ನಿರ್ಮಾಣ ಯೋಜನೆಯ ಶಂಕು ಸ್ಥಾಪನೆಯನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೆರವೇರಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭೈರತಿ ಬಸವರಾಜ್ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರ ನಾಯಕರ ಉಪಸ್ಥಿತಿಯಲ್ಲಿ ಈ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಹಳೇ ಬಸ್ ನಿಲ್ದಾಣದ ಪುನರ್ ನಿರ್ಮಾಣ ಯೋಜನೆಯ ಶಂಕುಸ್ಥಾಪನೆ

ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ ಯೋಜನೆಡಿ ನಿರ್ಮಾಣವಾಗುತ್ತಿದೆ. 18 ತಿಂಗಳಲ್ಲಿ ಪೂರ್ಣಗೊಳಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಇನ್ನು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮೀಸಲಾತಿ ಪ್ರಕಟವಾಗಿದೆ. ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಸಚಿವ ಸಂಪುಟದ ಬಗ್ಗೆ ಮಾತನಾಡಿ ಸಚಿವರು, ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಈ ಬಗ್ಗೆ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

ಇದನ್ನೂ ಓದಿ : ಕೊರೊನಾ ಏಟಿಗೆ ಬರಿದಾದ ರಾಜ್ಯದ ಬೊಕ್ಕಸ: 8 ಸಾವಿರ ಕೋಟಿ ರೂ ಸಾಲ ಪಡೆಯಲು ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.