ಎಸ್​ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಪತ್ತೆಯಾದ ಕೊರೊನಾ ಪ್ರಕರಣಗಳಲ್ಲಿ ಹೊಸ ಪ್ರಭೇದದ ವೈರಾಣು ಇಲ್ಲ: ಡಿಸಿ ಸ್ಪಷ್ಟನೆ

author img

By

Published : Dec 2, 2021, 10:54 PM IST

dc-nithesh-pateel

ಸಾರ್ವಜನಿಕರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರದೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಕೋವಿಡ್ ನಿರೋಧಕ ಎರಡು ಡೋಸ್ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ್ ತಿಳಿಸಿದ್ದಾರೆ.

ಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಬಾಕಿ ಇದ್ದ 140 ಜಿನೋಮ್ ಸಿಕ್ವೆನ್ಸಿಂಗ್ ವರದಿಗಳು ಲಭ್ಯವಾಗಿವೆ. ಇವುಗಳಲ್ಲಿ ಯಾವುದೇ ಹೊಸ ಪ್ರಭೇದದ ವೈರಾಣು ಕಂಡುಬಂದಿಲ್ಲ. ಹೀಗಾಗಿ, ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ್​​ ಹೇಳಿದ್ದಾರೆ.

ಎಸ್​ಡಿಎಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದ ಕೋವಿಡ್ ಪ್ರಕರಣಗಳ ಪ್ರಯೋಗಾಲಯ ಸ್ಯಾಂಪಲ್‌ಗಳನ್ನು ಜಿನೋಮ್ ಸಿಕ್ವೆನ್ಸಿಂಗ್‌ ಪತ್ತೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ನಿನ್ನೆ 113 ವರದಿಗಳ ಮಾಹಿತಿ ಸಿಕ್ಕಿತ್ತು. ಬಾಕಿ ಇದ್ದ 140 ವರದಿಗಳು ಇಂದು ದೊರೆತಿದ್ದು, ಇವುಗಳಲ್ಲಿ ಯಾವುದೇ ಹೊಸ ತಳಿಯ ವೈರಾಣು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಜನತೆ ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಆದರೆ, ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರದೇ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಕೋವಿಡ್ ನಿರೋಧಕ ಎರಡು ಡೋಸ್ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಓದಿ: ಆದಿವಾಸಿ ಮೇಲೆ ಗುಂಡಿನ ದಾಳಿ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.