ETV Bharat / state

ಧಾರವಾಡ ಜಿಲ್ಲೆಗೆ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು : ಸಚಿವ ಪ್ರಲ್ಹಾದ್ ಜೋಶಿ

author img

By

Published : Nov 22, 2020, 8:20 PM IST

Malaprabha river to Dharwad
ಸಚಿವ ಪ್ರಲ್ಹಾದ್ ಜೋಶಿ

ಸ್ವಚ್ಛ ಭಾರತ್ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತ್‌ಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ. ಪ್ರತಿ ಮನೆಯಲ್ಲೂ ಕಸ ವಿಂಗಡಣೆ ಮಾಡಬೇಕು. ಹಸಿ‌ ಹಾಗೂ ಒಣ ಕಸ ಸಂಗ್ರಹಿಸಲು ಗ್ರಾಮ ಪಂಚಾಯತ್‌ನಿಂದಲೇ ಹಸಿರು ಮತ್ತು ನೀಲಿ ಬುಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ..

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ, ಧಾರವಾಡ ಜಿಲ್ಲೆಯಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

Malaprabha river to Dharwad
ಸಚಿವ ಪ್ರಲ್ಹಾದ್ ಜೋಶಿ

1,100 ಕೋಟಿ ರೂ. ವೆಚ್ಚದ ಕಾಮಗಾರಿಯಾಗಿದ್ದು, ಕುಸುಗಲ್ ಗ್ರಾಮದಲ್ಲಿ ಆಯೋಜಿಸಲಾದ ಘನ ತ್ಯಾಜ್ಯ ವಿಲೇವಾರಿ ಘಟಕ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಭೂಮಿ ಪೂಜೆ, ಮುಕ್ತಿ ವನಸಹಾಯ ಕೇಂದ್ರ ಉದ್ಘಾಟನೆ ನೆರವೇರಿಸಿ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು. ಕೇಂದ್ರ ಸರ್ಕಾರ ಹರ್ ಘರ್ ಜಲ್ ಯೋಜನೆ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. 24*7 ನೀರು ಲಭ್ಯವಾಗುವಂತೆ ಮಾಡಲಾಗುವುದು.

Malaprabha river to Dharwad
ಸಚಿವ ಪ್ರಲ್ಹಾದ್ ಜೋಶಿ

ಸ್ವಚ್ಛ ಭಾರತ್ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತ್‌ಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ. ಪ್ರತಿ ಮನೆಯಲ್ಲೂ ಕಸ ವಿಂಗಡಣೆ ಮಾಡಬೇಕು. ಹಸಿ‌ ಹಾಗೂ ಒಣ ಕಸ ಸಂಗ್ರಹಿಸಲು ಗ್ರಾಮ ಪಂಚಾಯತ್‌ನಿಂದಲೇ ಹಸಿರು ಮತ್ತು ನೀಲಿ ಬುಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಕುಸುಗಲ್ ಗ್ರಾಮದಲ್ಲಿ 20 ಲಕ್ಷ ರೂ. ಅನುದಾನದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಘಟಕ ನಿರ್ಮಾಣಕ್ಕೆ 5 ಲಕ್ಷ ರೂ. ಹಣವನ್ನು ನರೇಗಾ ಯೋಜನೆಯಡಿ ಕೊಡಲಾಗಿದೆ.

Malaprabha river to Dharwad
ಸಚಿವ ಪ್ರಲ್ಹಾದ್ ಜೋಶಿ

ಧಾರವಾಡ ಜಿಲ್ಲೆಗೆ 60 ತ್ಯಾಜ್ಯ ವಿಲೇವಾರಿ ಘಟಕ ಮಂಜೂರಾಗಿದ್ದು, 20 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಸ್ವಚ್ಛತೆಗೆ ಗಮನ ನೀಡದೆ ಇರುವುದರಿಂದ ಹಲವು ಕಾಯಿಲೆಗಳು ಸಾಂಕ್ರಾಮಿಕ ರೋಗಗಳು ಹರಡುತ್ತವೆ. ರೋಗ ಬಂದಾಗ ಆಸ್ಪತ್ರೆಗಳಿಗೆ ಹಣ ವ್ಯಯಿಸುವ ಬದಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು. ಹುಬ್ಬಳ್ಳಿ ಬೈಪಾಸ್ ರಸ್ತೆಯಿಂದ ಕುಸುಗಲ್ ಗ್ರಾಮಕ್ಕೆ ಸರ್ವೀಸ್ ರೋಡ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

Malaprabha river to Dharwad
ಸಚಿವ ಪ್ರಲ್ಹಾದ್ ಜೋಶಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.