ETV Bharat / state

ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ

author img

By

Published : Mar 21, 2019, 11:05 PM IST

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಭೇಟಿ ನೀಡಿ ಮೃತರ ಕುಟುಂಬಸ್ಥರು ಹಾಗೂ ಗಾಯಾಳುಗಳಿಗೆ ಸೂಕ್ತ ಪರಿಹಾರ ಕೊಡುವಂತೆ ಒತ್ತಾಯಿಸಿದರು. ಅಲ್ಲದೆ ಅವಶೇಷಗಳಡಿ ಸಿಲುಕಿದವರು ಸುರಕ್ಷಿತವಾಗಿ ಹೊರಬರಲಿ ಎಂದು ಪ್ರಾರ್ಥಿಸಿದರು.

ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ.

ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟಡ ದುರಂತದಲ್ಲಿ ಸದ್ಯಕ್ಕೆ 9 ಜನ ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದವರು ಸುರಕ್ಷಿತವಾಗಿ ಹೊರಬರಲಿ ಅಂತಾ ಪ್ರಾರ್ಥಿಸುವುದಾಗಿ ಹೇಳಿದರು.

ಇನ್ನು ಈ ದುರಂತಕ್ಕೆ ಕಾರಣರಾದ ಕಟ್ಟಡ ಮಾಲೀಕರು ಹಾಗೂ ಎಂಜಿನೀಯರ್​ಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಶೆಟ್ಟರ್​ ಆಗ್ರಹಿಸಿದರು.

ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ.

ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಮೃತರ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಗಾಯಾಳುಗಳಿಗೆ 2 ರಿಂದ 5 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಪರವಾನಗಿ ಇಲ್ಲದೇ ಹೆಚ್ಚುವರಿ ಅಂತಸ್ತು ಕಟ್ಟಡ ಕಟ್ಟಿ ಕಳಪೆ ಕಾಮಗಾರಿ ಮಾಡಲು ಸಹಕರಿಸಿದ ಪಾಲಿಕೆ ಸಿಬ್ಬಂದಿ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.