ETV Bharat / state

ಸಿಐಡಿ ತನಿಖೆ ನಡುವೆಯೇ ಗ್ರಾಪಂ ಸದಸ್ಯ ದೀಪಕ್​ ಪಟದಾರಿ‌ ಪತ್ನಿ ಆತ್ಮಹತ್ಯೆ

author img

By

Published : Sep 28, 2022, 10:07 PM IST

gram-panchayat-member-deepak-patadari-wife-commits-suicide
ಸಿಐಡಿ ತನಿಖೆ ನಡುವೆಯೇ ಗ್ರಾಪಂ ಸದಸ್ಯ ದೀಪಕ್​ ಪಟದಾರಿ‌ ಪತ್ನಿ ಆತ್ಮಹತ್ಯೆ

ಇತ್ತೀಚೆಗೆ ಕೊಲೆಗೀಡಾದ ಗಂಗಿವಾಳ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್​​ ಪಟದಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ಗಂಗಿವಾಳ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್​​ ಪಟದಾರಿ ಕೊಲೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿರುವ ನಡುವೆಯೇ ಪಟದಾರಿ ಪತ್ನಿ ಪುಷ್ಪಾ ನವನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ರಾಯನಾಳದ ನಿವಾಸಿಯಾಗಿದ್ದ ದೀಪಕ್ ಪಟದಾರಿಯನ್ನ ಪ್ರೀತಿಸಿ ಮದುವೆಯಾಗಿದ್ದ ಪುಷ್ಪಾ ಅವರಿಗೆ ಎರಡು ಮಕ್ಕಳಿದ್ದರು. ದೀಪಕ್ ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ಒಪ್ಪಿಸಿದೆ.‌ ಈ ಸಂಬಂಧ ಸಿಐಡಿ ಅಧಿಕಾರಿಗಳು ಕಳೆದ ಒಂದು ವಾರದಿಂದ ವಿಚಾರಣೆ ನಡೆಸುತ್ತಿದ್ದಾರೆ.‌ ಪುಷ್ಪಾ ಅವರನ್ನು ಕೂಡ ಸಿಐಡಿ ಅಧಿಕಾರಿಗಳು ಕರೆದು ಮಾಹಿತಿ ಪಡೆದುಕೊಂಡಿದ್ದರು. ಪ್ರಕರಣ ವಿಚಾರಣೆ ನಡೆಯುತ್ತಿರುವಾಗಲೇ ಪುಷ್ಪಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಪೊಲೀಸರು ತನಿಖೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪ್ರಕರಣವನ್ನು ಉನ್ನತಮಟ್ಟದ ತನಿಖೆ ನಡೆಸುವಂತೆ ಪುಷ್ಪಾ ಮಾಧ್ಯಮಗೋಷ್ಠಿ ನಡೆಸಿ ಅಳಲು ತೋಡಿಕೊಂಡಿದ್ದರು. ಜುಲೈ 4ರಂದು ಗ್ರಾಪಂ ಸದಸ್ಯ ದೀಪಕ್ ಪಟದಾರಿಯನ್ನು ಹುಬ್ಬಳ್ಳಿ ತಾಲೂಕಿನ ರಾಯನಾಳ ಬಳಿ ಕೊಲೆ ಮಾಡಲಾಗಿತ್ತು.

ಪುಷ್ಪಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೀಪಕ್ ಪಟದಾರಿ ಕೊಲೆ ಪ್ರಕರಣ​: ತನಿಖೆ ಚುರುಕುಗೊಳಿಸಿದ ಸಿಐಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.