ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ಸಿಬ್ಬಂದಿ.. ವೈದ್ಯಾಧಿಕಾರಿ ವಿರುದ್ಧ ಕಿರುಕುಳ ಆರೋಪ

author img

By

Published : Sep 20, 2021, 4:25 PM IST

Updated : Sep 20, 2021, 4:37 PM IST

Health department Staff Suicide attempt in Hubballi

ಈ ಹಿಂದೆ ಕೂಡ ವೈದ್ಯಾಧಿಕಾರಿ ವಿರುದ್ಧ ಗ್ರಾಮಸ್ಥರಿಂದಲೂ ಸಾಕಷ್ಟು ದೂರು ಕೇಳಿ ಬಂದಿದ್ದವು..

ಹುಬ್ಬಳ್ಳಿ : ವೈದ್ಯಕೀಯ ಸಿಬ್ಬಂದಿಯೊಬ್ಬರು ಡೆತ್​ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಸಿಬ್ಬಂದಿ ಎಂ ಐ ಸೂಡಿ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದವರು. ವೈದ್ಯಾಧಿಕಾರಿಯೊಬ್ಬರ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿರುವುದಾಗಿ ಡೆತ್​ನೋಟ್ ಬರೆದಿದ್ದಾರೆ.

Health department Staff Suicide attempt in Hubballi
ಹುಬ್ಬಳ್ಳಿಯಲ್ಲಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ಸಿಬ್ಬಂದಿ

ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಆ್ಯಂಬುಲೆನ್ಸ್ ಮೂಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿಂದೆ ಕೂಡ ವೈದ್ಯಾಧಿಕಾರಿ ವಿರುದ್ಧ ಗ್ರಾಮಸ್ಥರಿಂದಲೂ ಸಾಕಷ್ಟು ದೂರು ಕೇಳಿ ಬಂದಿದ್ದವು.

ಈಗ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಬಗ್ಗೆ ಹಿರಿಯ ಅಧಿಕಾರಗಳು ಸೂಕ್ತ ಕ್ರಮಗಳನ್ನು ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಓದಿ: ಕಾರು ಪಲ್ಟಿ.. ಸ್ಥಳದಲ್ಲೇ ದಂಪತಿ‌ ಸಾವು.. ಮಗ ಮತ್ತು ಮಗಳು ಅಚ್ಚರಿಯ ರೀತಿ ಪಾರು..

Last Updated :Sep 20, 2021, 4:37 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.