ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋದು ಬೇಡ, ಬಂದ್ರೆ ಕಾನೂನು ಕ್ರಮ: ಸಿಎಂ‌ ಬೊಮ್ಮಾಯಿ

author img

By

Published : Dec 5, 2022, 11:26 AM IST

Updated : Dec 5, 2022, 1:43 PM IST

CM Basavaraja Bommai

ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಬರೋದು ಬೇಡ, ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಆಗುತ್ತೆ. ಹೀಗಾಗಿ ಬರೋದು ಉಚಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋದು ಬೇಡ ಎಂದು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳ ಮೂಲಕ ಮಹಾರಾಷ್ಟ್ರದ ಕಾರ್ಯದರ್ಶಿಗಳಿಗೆ ಲಿಖಿತ ರೂಪದಲ್ಲಿ ತಿಳಿಸಲಾಗಿದೆ. ಅದಾಗ್ಯೂ ಅವರು ಬೆಳಗಾವಿಗೆ ಬರುವ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಇರುವ ವಾತಾವರಣದಲ್ಲಿ ಬೆಳಗಾವಿಗೆ ಸಚಿವರು ಬರೋದು ಬೇಡ, ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಆಗುತ್ತೆ. ಹೀಗಾಗಿ ಬರೋದು ಉಚಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೂ ಅವರು ಬರುತ್ತೇವೆ ಎನ್ನುವುದು ಸರಿಯಾದ ಕ್ರಮ ಅಲ್ಲ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಹಾರಾಷ್ಟ್ರ, ಕರ್ನಾಟಕ ಜನರ ನಡುವೆ ಸಾಮರಸ್ಯ ಇದೆ. ಇದೇ ಸಂದರ್ಭದಲ್ಲಿ ಗಡಿವಿವಾದ ಕೂಡ ಇದೆ. ಗಡಿವಿವಾದ ಕರ್ನಾಟಕದ ಪ್ರಕಾರ ಮುಗಿದು ಹೋಗಿರುವ ಅಧ್ಯಾಯ. ಆದರೆ ಮಹಾರಾಷ್ಟ್ರ ಪದೇ ಪದೇ ಕ್ಯಾತೆ ತಗೆದು ಸುಪ್ರೀಂ ಕೋರ್ಟ್​ಗೆ ಹೋಗಿದ್ದಾರೆ. ಇಂತಹ ಸಂದರ್ಭಗಳಲ್ಲಿ ಮಹಾರಾಷ್ಟ್ರದ ಸಚಿವರು ರಾಜ್ಯಕ್ಕೆ ಬರುವ ಸಾಹಸ ಮಾಡಿದ್ದಾರೆ. ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ನಾನು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಪ್ರತಿಭಂದಕ ಕಾಯ್ದೆ ಜಾರಿ ಮಾಡುವ ವಿಚಾರವಾಗಿ ಮಾತನಾಡಿದ ಸಿಎಂ, ಹಿಂದೆ ಈ ತರಹ ಆದಾಗೆಲ್ಲಾ ಸರ್ಕಾರ ಯಾವ ಕ್ರಮ ಕೈಗೊಂಡಿದೆಯೋ ಅದೆಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಕೇಸರಿ ಶಾಲೆ ವಿಚಾರವಾಗಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿ, ನಾನು ಈ ಬಗ್ಗೆ ಚರ್ಚೆ ಮಾಡೋಕೆ ಹೋಗಲ್ಲ. ಮೊದಲು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡೋದು ನಮ್ಮ ಲಕ್ಷ್ಯ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಮಹಾರಾಷ್ಟ್ರ ಸಚಿವರ ವಿರುದ್ಧ ಪ್ರತಿಬಂಧಕಾಜ್ಞೆ ಕಾಯ್ದೆಗೆ ಸಿದ್ಧ: ಸಿಎಂ ಬೊಮ್ಮಾಯಿ ಸುಳಿವು

Last Updated :Dec 5, 2022, 1:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.