ETV Bharat / state

ಪತ್ನಿಯೊಂದಿಗೆ ಜಗಳ : ಮನನೊಂದು ಪತಿ ಆತ್ಮಹತ್ಯೆ

author img

By

Published : Oct 30, 2020, 8:35 PM IST

ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ..

Man suicides in Dharwad due to family conflict
ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಧಾರವಾಡ : ಪತ್ನಿ ಜಗಳವಾಡಿದ್ದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.‌

ಕಿತ್ತೂರು ತಾಲೂಕು ಹಿರೇನಂದಿಹಳ್ಳಿ ಗ್ರಾಮದ ಮಹಾಂತೇಶ ಈರಪ್ಪ ಹುರಕಡ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಧಾರವಾಡದ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಾಂತೇಶನನ್ನು ಕುಟುಂಬಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಈ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.