ETV Bharat / state

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಿಂದ ನಾಮಪತ್ರ ವಾಪಸ್

author img

By

Published : Apr 24, 2023, 5:15 PM IST

ಕಾಂಗ್ರೆಸ್ ನಾಯಕರು ಮನವೊಲಿಸಿದ ನಂತರ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ಅಲ್ತಾಫ್​ ಕಿತ್ತೂರು ಅವರು ಸಲ್ಲಿಸಿದ್ದ ನಾಮಪತ್ರವನ್ನು ಇಂದು ಹಿಂಪಡೆದರು.

Altaf Kittoor
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಿಂದ ನಾಮಪತ್ರ ವಾಪಸ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಸುದ್ದಿಯಾಗಿದೆ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೆ ಬಿಜೆಪಿ ಟಿಕೆಟ್​ ತಪ್ಪಿದ್ದು, ಮತ್ತು ನಂತರ ಅವರು ಪಕ್ಷದ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್​ ಸೇರಿದ್ದು ರಾಜ್ಯ ರಾಜಕೀಯದಲ್ಲಿ ಹೆಚ್ಚು ಸದ್ದು ಮಾಡಿತ್ತು. ಅಲ್ಲದೆ, ಕಾಂಗ್ರೆಸ್​ ಅಭ್ಯರ್ಥಿಯಾಗಿ ಅದೇ ಅಖಾಡದಿಂದ ಶೆಟ್ಟರ್​ ಸ್ಪರ್ಧೆಗಿಳಿದಿದ್ದಾರೆ. ಈ ನಡುವೆ ಕಾಂಗ್ರೆಸ್​ ಟಿಕೆಟ್​ ಅಕಾಂಕ್ಷಿ ಆಗಿದ್ದ ಅಲ್ತಾಫ್​ ಕಿತ್ತೂರು ಅವರು ಬಂಡಾಯ ಎದ್ದಿದ್ದರಿಂದಲೂ ಈ ಕ್ಷೇತ್ರದ ರಾಜಕೀಯ ಬೆಳವಣಿಗೆ ಚರ್ಚೆ ಆಗಿದ್ದು ಗೊತ್ತೇ ಇದೆ. ಈ ಮಧ್ಯೆ ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್​ ಕಿತ್ತೂರು ಅವರು, ಇಂದು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಕಾಂಗ್ರೆಸ್​ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅವರು ಪಕ್ಷದ ನಾಯಕರ ಮನವೊಲಿಕೆಗೆ ಮಣಿದಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಹಾಗೂ ಮುಸ್ಲಿಂ ಅಭ್ಯರ್ಥಿಗಳಿಗೆ ಈ ಬಾರಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಅಲ್ತಾಫ್​ ಕಿತ್ತೂರು ಕಾಂಗ್ರೆಸ್​ನ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಇದನ್ನೂ ಓದಿ: ಗೋಕಾಕ್​ನಲ್ಲಿ ಈ ಬಾರಿ ಮೌನ ಕ್ರಾಂತಿಯಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಕಾಂಗ್ರೆಸ್​ ನಾಯಕರಿಂದ ಅಲ್ತಾಫ್​ ಕಿತ್ತೂರು ಮನವೊಲಿಕೆ: ಆದರೆ, ಇದೀಗ ಕಾಂಗ್ರೆಸ್​ ನಾಯಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ, ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾಮಪತ್ರ ವಾಪಸ್ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ನಾನು ನಾಮಪತ್ರ ವಾಪಸ್ ತಗೆದುಕೊಂಡಿರುವುದಾಗಿ ಕಾಂಗ್ರೆಸ್​ ಮುಖಂಡ ಅಲ್ತಾಫ್​ ಕಿತ್ತೂರು ತಿಳಿಸಿದರು.

ಇದನ್ನೂ ಓದಿ: ನಮ್ಮ ಗುರಿ ಮುಟ್ಟೋದಕ್ಕೆ ರಾಹುಲ್​ ಗಾಂಧಿ ಸಹಕಾರ ನೀಡಬೇಕು: ಕೆ ಎಸ್ ಈಶ್ವರಪ್ಪ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉತ್ತಮ ಸ್ಥಾನಮಾನ ನೀಡುವ ಭರವಸೆ: ಇದರೊಂದಿಗೆ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆಗ ನಮಗೆ ಸೂಕ್ತವಾದ ಸ್ಥಾನಮಾನ ಕೊಡುವ ಭರವಸೆ ನೀಡಿದ್ದಾರೆ. ಈ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಪರವಾಗಿ ಉತ್ತಮ ಕೆಲಸ ಮಾಡಿ ಅವರನ್ನು ಬಹುಮತದಿಂದ ಆರಿಸಿ ತರುವಂತೆ ಪಕ್ಷದ ವರಿಷ್ಟರು ಸೂಚನೆ ನೀಡಿದ್ದಾರೆ. ಅವರ ಮಾತಿಗೆ ಮನ್ನಣೆ ಕೊಟ್ಟು ಇಂದು ನಾಮಪತ್ರ ವಾಪಸ್ ತೆಗೆದುಕೊಂಡಿರುವದಾಗಿ ಅಲ್ತಾಫ್​ ಕಿತ್ತೂರು ಅವರು ತಿಳಿಸಿದರು.

ಇದನ್ನೂ ಓದಿ: ವೀರಶೈವ ಮತಗಳು ಕೈಬಿಡುತ್ತವೆ ಎಂಬ ಆತಂಕ ಇಲ್ಲ : ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಕುಮಾರ್​ ಬಂಗಾರಪ್ಪ ವಿರುದ್ದ ಸ್ಪರ್ಧೆ ಮಾಡಲು ನಮ್ಮ ತಂದೆಯೇ ಹೇಳಿದ್ದರು: ಮಧು ಬಂಗಾರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.