ETV Bharat / state

ನಿಮ್ಮ ಮಕ್ಕಳು ಶಾಲೆಗೆ ಹೋಗ್ಬೇಕಂದ್ರೆ, ನೀವು ಕಡ್ಡಾಯವಾಗಿ ಲಸಿಕೆ ಪಡೆಯಲೇಬೇಕು: ಧಾರವಾಡ ಡಿಸಿ

author img

By

Published : Oct 21, 2021, 3:33 PM IST

nitesh_patil
nitesh_patil

ಮಕ್ಕಳನ್ನು ಶಾಲೆಗೆ ಕಳಿಸಬೇಕೆಂದರೆ ಪೋಷಕರು ಕಡ್ಡಾಯವಾಗಿ ಕೋವಿಡ್​ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು ಎಂದು ಹುಬ್ಬಳ್ಳಿ-ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಸೂಚಿಸಿದ್ದಾರೆ.

ಹುಬ್ಬಳ್ಳಿ: ಮಕ್ಕಳನ್ನು ಶಾಲೆಗೆ ಕಳಿಸಬೇಕೆಂದರೆ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಲೇಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.

ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಡಿಸಿ ಸೂಚನೆ

ನಗರದಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಕೋವಿಡ್ ಮಾರ್ಗಸೂಚಿ ಅನುಸರಿಸಿ ಶಾಲೆ ಪುನಾರಂಭ ಮಾಡುತ್ತೇವೆ. ನಿನ್ನೆಯಷ್ಟೇ ಸರ್ಕಾರದ ಆದೇಶ ನನಗೆ ತಲುಪಿದ್ದು, ಈ ಕುರಿತು ಜಿಲ್ಲೆಯ ಡಿಡಿಪಿಐ ಜತೆಗೆ ಸಭೆ ನಡೆಸುತ್ತೇನೆ ಎಂದರು.

ಪಾಲಕರು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದುಕೊಳ್ಳುವ ಬಗ್ಗೆ ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ. ಅವರೆಲ್ಲರೂ ಎಲ್ಲರ ಮನೆಗೆ ಹೋಗಿ ಈ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದರು. ಜಿಲ್ಲೆಯಲ್ಲಿ ಶೇಕಡಾ 81 ರಷ್ಟು ಜನ ಲಸಿಕೆ ಹಾಕಿಸಿಕೊಂಡಿದ್ದು, ಇನ್ನೂ ಒಂದು ಲಕ್ಷಕ್ಕೂ ಅಧಿಕ ಡೋಸ್​ಗಳು ಲಭ್ಯವಿದೆ. ಯಾರು ಲಸಿಕೆ ಪಡೆದಿಲ್ಲವೋ ಅವರು, ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಕರೆ ನೀಡಿದರು.

ಇದನ್ನೂ ಓದಿ: ಮೊದಲು ಸಮಿತಿಯ ವರದಿ ಪಡೆದು ಮೀಸಲಾತಿ ಬಗ್ಗೆ ಜನರಲ್ಲಿ ಭರವಸೆ ಮೂಡಿಸಬೇಕು: ಕೂಡಲಸಂಗಮ ಶ್ರೀ

ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ ಕಡಿಮೆ ಇದ್ದರೂ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಇನ್ನೆರಡು ದಿನಗಳಲ್ಲಿ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಕೆ ಮಾಡಲಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.