ETV Bharat / state

ಹುಬ್ಬಳ್ಳಿಯಲ್ಲಿ ರಸ್ತೆ ಅಗಲೀಕರಣ ಹಿನ್ನೆಲೆ ಕಾರ್ಯಾಚರಣೆ.. ದರ್ಗಾ ಬಳಿ ಪೊಲೀಸ್ ಬಂದೋಬಸ್ತ್

author img

By

Published : Dec 20, 2022, 10:53 PM IST

ಹುಬ್ಬಳ್ಳಿ ಭೈರಿದೇವರಕೊಪ್ಪದಲ್ಲಿ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಈ ಹಿನ್ನೆಲೆ ದರ್ಗಾ ಬಳಿ ಪೊಲೀಸ್ ಕಮೀಷನರೇಟ್​ನಿಂದ ಬಂದೋಬಸ್ತ್​ ನಿಯೋಜನೆ ಮಾಡಲಾಗಿದೆ.

Tight police deployment near Bhairidevarakoppa Dargah
ಭೈರಿದೇವರಕೊಪ್ಪ ದರ್ಗಾ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ

ಹುಬ್ಬಳ್ಳಿ : ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ದರ್ಗಾದ ಬಳಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ದರ್ಗಾದ ಆಡಳಿತ ಮಂಡಳಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹಾಗಾಗಿ ಎಲ್ಲೆಡೆಯೂ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

ಈಗಾಗಲೇ ದರ್ಗಾದ ಆಡಳಿತ ಮಂಡಳಿಯು ಸಿಎಂ ಬಸವರಾಜ ಬೊಮ್ಮಾಯಿಯವರ ಭೇಟಿಗೆ ತೆರಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ದರ್ಗಾದ ಕಾರ್ಯಾಚರಣೆ ಬಗ್ಗೆ ಸಭೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ : ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಚಮನ್ ಷಾ ವಲಿ ದರ್ಗಾ ಉರುಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.