ETV Bharat / state

ಬಿಟ್ಟಿ ಹಣದಲ್ಲಿ ಜನಸ್ಪಂದನ ಕಾರ್ಯಕ್ರಮ: ಬಿಜೆಪಿ ವಿರುದ್ದ ಸಿದ್ದರಾಮಯ್ಯ ಕಿಡಿ

author img

By

Published : Sep 10, 2022, 3:40 PM IST

Kn_hbl_02_e
ಬಿಜೆಪಿ ವಿರುದ್ದ ಸಿದ್ದರಾಮಯ್ಯ ಕಿಡಿ

ಬಿಜೆಪಿ ಪಕ್ಷದವರು ಲಂಚ ಪಡೆದ ಹಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹುಬ್ಬಳ್ಳಿ/ಬೆಂಗಳೂರು: ಬಿಜೆಪಿಯವರು ಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡ್ತಿದಾರೆ. ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.‌ ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಆದರೆ, ಪರಿಹಾರ ಕೊಡುವುದನ್ನು ಬಿಟ್ಟು ಲಂಚ ಹೊಡೆದಿರೋ ದುಡ್ಡಿನಲ್ಲಿ ಬಿಜೆಪಿಯವರು ಕಾರ್ಯಕ್ರಮ ಮಾಡ್ತಿದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ವಿರುದ್ದ ಸಿದ್ದರಾಮಯ್ಯ ಕಿಡಿ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡ್ತಿದಾರೆ. ಉಮೇಶ ಕತ್ತಿಯವರು ಉತ್ತರ ಕರ್ನಾಟಕದ ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ ರಾಜಕಾರಣಿ. ಅವರ ನಿಧನದ ಹಿನ್ನೆಲೆ ಒಂದು ಕಡೆ ಶೋಕಾಚರಣೆ ಮಾಡ್ತೀವಿ ಅಂತಾರೆ ಇನ್ನೊಂದುಕಡೆ ಡ್ಯಾನ್ಸ್ ಮಾಡ್ತಾರೆ ಎಂದು ವ್ಯಂಗ್ಯವಾಡಿದರು.

ಜನರಿಗೆ ಸ್ಪಂದಿಸದೇ ಏನು ಕಾರ್ಯಕ್ರಮ ಮಾಡ್ತಾರೇ?. ಹೇಳ್ಕೊಳ್ಳುವುದಕ್ಕೆ ಇವರ ಹತ್ರ ಏನು ಸಾಧನೆಗಳಿವೆ? ಶೇ 40ರಷ್ಟು ಕಮಿಷನ್ ಬಗ್ಗೆ ಹೇಳಿಕೊಳ್ಳಬೇಕಷ್ಟೇ. ಜನ ಸೇರಿಸ್ಕೊಂಡು ದುಡ್ಡು ಖರ್ಚು ಮಾಡ್ಕೊಂಡು ರಾಜಕೀಯ ಮಾಡ್ತಿದ್ದಾರೆ. ಇದು ರಾಜಕೀಯ ಪ್ರೇರಿತ ಜನ ಸ್ಪಂದನ. ಜನ ಸ್ಪಂದನ ಅಂದ್ರೆ ಏನು? ಜನರ ಕಷ್ಟಕ್ಕೆ ಸ್ಪಂದಿಸುವುದು ಜನ ಸ್ಪಂದನ. ಬರೀ ಹೆಸರು ಮಾತ್ರ ಜನ ಸ್ಪಂದನ ಅಂದ್ರೆ ಆಗುತ್ತ ಎಂದು ಹರಿಹಾಯ್ದರು.

ಬಿಜೆಪಿಯವರಿಗೆ ಜರ ಬಗ್ಗೆ ಖಾಳಜಿ ಇಲ್ಲ: ಬಿಜೆಪಿಯವರಿಗೆ ಜನರ ಬಗ್ಗೆ ಖಾಳಜಿ ಇಲ್ಲ ದುಡ್ಡು ಹೊಡೆಯೋದರಲ್ಲಿ ಮಾತ್ರ ಕಾಳಜಿ ಇದೆ. ಪಿಎಸ್​ಐ ಹಗರಣದಲ್ಲಿ ಶಾಸಕ ಬಸವರಾಜ ದಡೇಸುಗೂರು ಹಣ ಪಡೆದ ಬಗ್ಗೆ ತಾವೇ ಒಪ್ಪಿಕೊಂಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿ ತನಿಖೆ ನಡೆಸಬೇಕು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಪ್ರಿಯಾಂಕ್ ಖರ್ಗೆ ಮಾತನಾಡಿದರೆ ನೋಟೀಸ್ ಕೊಡ್ತಾರೆ ಆದ್ರೆ ಅವರ ಶಾಸಕ ಸ್ವತ ಒಪ್ಪಿಕೊಂಡ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರು ಪ್ರತಿಯೊಂದು ವಿಷಯದಲ್ಲೂ ಸೇಡಿನ ರಾಜಕೀಯ ಮಾಡ್ತಿದ್ದಾರೆ. ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನಾಚರಣೆ ಪ್ರತ್ಯುತ್ತರವಾಗಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ.‌

ನನ್ನ ಜನ್ಮದಿನಾಚರಣೆಗೆ ಜನ ತಾವಾಗೇ ಬಂದರು, ಆದ್ರೆ ಜನಸ್ಪಂದನಕ್ಕೆ ದುಡ್ಡು ಕೊಟ್ಟು ಕರೆಸುತ್ತಿದ್ದಾರೆ‌ ಎಂದು ಕಿಡಿ ಕಾರಿದರು. ಎಸಿಬಿ ರದ್ದು ಪಡಿಸಿ ಲೋಕಾಯುಕ್ತ ಮರು ರಚನೆ ಮಾಡಿರುವುದು ಸ್ವಾಗತಾರ್ಹ, ನ್ಯಾಯಾಲಯದಿಂದಲೇ ಆದೇಶವಿದೆ ಹೀಗಾಗಿ ನಾವು ಸ್ವಾಗತ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಎಂಟಿಬಿ, ವಿಶ್ವನಾಥ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.