ETV Bharat / state

ಲಂಚ ಸ್ವೀಕರಿಸುತ್ತಿದ್ದಾಗ ರೆಡ್​ ಹ್ಯಾಂಡ್​ ಆಗಿ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

author img

By ETV Bharat Karnataka Team

Published : Dec 20, 2023, 7:00 AM IST

ಲಂಚ ಸ್ವೀಕರಿಸುತ್ತಿದ್ದಾಗ ಏತ ನೀರಾವರಿ ಇಲಾಖೆ ಇಬ್ಬರು ಅಧಿಕಾರಿಗಳು ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

Etv Bharat
Etv Bharat

ಧಾರವಾಡ: ಲಂಚ ಪಡೆಯುತ್ತಿದ್ದ ವೇಳೆ ಹಾವೇರಿ ಲೋಕಾಯುಕ್ತರು ದಾಳಿ ಮಾಡಿದ್ದು, ಏತ ನೀರಾವರಿ ಇಲಾಖೆ ಇಬ್ಬರು ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ. ಏತ ನೀರಾವರಿ ಇಲಾಖೆ ಕಚೇರಿಯಲ್ಲಿ ಲಂಚ ಸ್ವೀಕಾರ ಮಾಡುತ್ತಿದ್ದ ಸಮಯದಲ್ಲಿ ಮಂಜುನಾಥ ಬಿ. ಹಾಗೂ ಪ್ರಕಾಶ ಹೊಸಮನಿ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾರೆ.

ಶಿಗ್ಗಾವಿ ಏತ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ ಹಾಗೂ ಕಿರಿಯ ಅಭಿಯಂತರ ಪ್ರಕಾಶ ಅವರು ಗುತ್ತಿಗೆದಾರ ಬಾಲಕೃಷ್ಣ ನಾಯ್ಕರಿಂದ ಅಧಿಕಾರಿಗಳು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ನಡೆಯಬೇಕಿದ್ದ ರಸ್ತೆ ಕಾಮಗಾರಿಗಳ ಮೊದಲ ಬಿಲ್​ಗೆ ಲಂಚ ಪಡೆದುಕೊಂಡು ಅಧಿಕಾರಿಗಳು ಮಂಜೂರಿ ಮಾಡಿದ್ದರು. ಅಂತಿಮ ಬಿಲ್ ಪಾಸ್ ಮಾಡಲು ಪುನಃ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಣ ಕೊಡುವಾಗ ಲೋಕಾಯುಕ್ತರು ಟ್ರ್ಯಾಪ್ ಮಾಡಿದ್ದಾರೆ.
ಇದನ್ನೂ ಓದಿ: ಮೈಸೂರು: ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಉಪನ್ಯಾಸಕನಿಂದ ಶಿಕ್ಷಕರಿಗೆ ವಂಚನೆ ಆರೋಪ

ಹಿಂದಿನ ಪ್ರಕರಣಗಳು, ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಿಇಒ ಮೇಲೆ ದಾಳಿ: ಧಾರವಾಡ ಜಿಲ್ಲೆಯ ಕುಂದಗೋಳ ಬಿಇಒ ನಿವಾಸದ ಮೇಲೆ ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಕುಂದಗೋಳ ಬಿಇಒ ಡಾ.ವಿದ್ಯಾ ಕುಂದರಗಿ ಅವರ ಧಾರವಾಡ ಹೊಯ್ಸಳ ನಗರ ಬಡಾವಣೆಯಲ್ಲಿನ ಮನೆ ಮೇಲೆ ದಾಳಿ ಮಾಡಲಾಗಿತ್ತು.

ಎಸ್ಪಿ ಸತೀಶ ಚಿಟಗುಬ್ಬಿ ನೇತೃತ್ವದ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು. ಧಾರವಾಡ ಜಿಲ್ಲೆ ಕುಂದಗೋಳ ವಲಯ ಬಿಇಒ ಆಗಿ ಡಾ.ವಿದ್ಯಾ ಕುಂದರಗಿ ಕೆಲಸ ಮಾಡುತ್ತಿದ್ದರು. ಬಿಇಒ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಧಾರವಾಡ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ನಿವೃತ್ತಿ ಹಣ ಮಂಜೂರು ಮಾಡಲು ದಾಖಲೆ ರವಾನಿಸಲು ಮಂಜುನಾಥ ಕುರುವಿನಶೆಟ್ಟಿ ಎಂಬವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಜುನಾಥ, ಹರ್ಲಾಪುರ ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕರಾಗಿದ್ದಾರೆ. 8,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಬಿಇಒ ಸಿಕ್ಕಿಬಿದ್ದಿದ್ದರು.

ಮನೆಯ ಜಿಪಿಎಸ್​ ಮಾಡಿಸಿಕೊಡಲು ಲಂಚಕ್ಕೆ ಬೇಡಿಕೆ: ಮಂಜೂರಾಗಿರುವ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಸಮಯದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧನ ಮಾಡಿದ್ದ ಘಟನೆ ಹಾವೆರಿಯಲ್ಲಿ ಇತ್ತೀಚೆಗೆ ಜರುಗಿತ್ತು. ದೂರುದಾರರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಮನೆ ಮಂಜೂರು ಮಾಡಲಾಗಿತ್ತು. ಈ ಮನೆಗೆ ಜಿಪಿಎಸ್ ಮಾಡಿಸಲು ಗ್ರಾಮ ಪಂಚಾಯ್ತಿ ಸದಸ್ಯ ​40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟದ್ದ‌ರು. 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಮಯದಲ್ಲಿ ಲೋಕಾಯುಕ್ತರ ಪೊಲೀಸರ ಬಲೆಗೆ ಬಿದ್ದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.