ETV Bharat / state

ಗಣಪತಿ ಪ್ರತಿಷ್ಠಾಪನೆ ಅನುಮತಿಗೆ ಕೇಂದ್ರ ಸಚಿವ ಜೋಶಿ ಆಗ್ರಹ: ಮುಂದುವರಿದ ಅಹೋರಾತ್ರಿ ಧರಣಿ..!

author img

By ETV Bharat Karnataka Team

Published : Sep 14, 2023, 10:59 PM IST

ಗಣಪತಿ ಪ್ರತಿಷ್ಠಾಪನೆ ಕೇಂದ್ರ ಸಚಿವ ಜೋಶಿ ಆಗ್ರಹ
ಗಣಪತಿ ಪ್ರತಿಷ್ಠಾಪನೆ ಕೇಂದ್ರ ಸಚಿವ ಜೋಶಿ ಆಗ್ರಹ

ಈದ್ಗಾದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಆಗ್ರಹಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ನಡೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಗಣಪತಿ ಉತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ ಈದ್ಗಾ ಮೈದಾನದಲ್ಲಿ ಅನುಮತಿ ನೀಡಲು ಮೀನಮೇಷ ಎಣಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತಿವಿ: ಈದ್ಗಾದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ನೀಡಿದರು. ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ ಎಂದರು.

ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ ನೀಡಲು ಅವಕಾಶವಿದೆ. ಹೀಗಿದ್ದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಿರುವುದು ಹಿಂದೂಗಳ ಭಾವನೆಗೆ ದಕ್ಕೆಯನ್ನುಂಟು ಮಾಡುತ್ತಿದೆ. ಇಂತಹ ಜನವಿರೋಧಿ ನೀತಿಯನ್ನು ಕೈ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಮಿಷನರ್ ಕಚೇರಿ ನುಗ್ಗಿದ ಕಾರ್ಯಕರ್ತರು: ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗ್ಗೆಯಿಂದ ಹೊರಗೆ ಕುಳಿತಿದ್ದ ಪ್ರತಿಭಟನಾಕಾರರು ಏಕಾಏಕಿ ಕಮಿಷನರ್ ಕಚೇರಿಯ ಬಾಗಿಲು ತೆರೆದು ಒಳಗೆ ನುಗ್ಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಜೊತೆಗೆ ಜಟಾಪಟಿ ನಡೆಸಿ ನೂಕು ನುಗ್ಗಲಿನಲ್ಲಿಯೇ ಕಮಿಷನರ್ ಕಚೇರಿಯ ಬಾಗಿಲು ತೆರೆದು ಒಳಗೆ ನುಗ್ಗಿ ಕಮೀಷನರ್ ಕಚೇರಿಯಲ್ಲಿಯೇ ಪ್ರತಿಭಟನೆ ನಡೆಸಿ ಕಮಿಷನರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಆಗ್ರಹಿಸಿದ್ದು, ಕಮಿಷನರ್ ವಿರುದ್ಧ ಕಿಡಿ ಕಾರಿದ್ದು, ನಾವೆಲ್ಲರೂ ಹಿಂದೂ ನಾವೆಲ್ಲರೂ ಒಂದು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಕಾಲ ಕಚೇರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು ತಳ್ಳಾಟ ನೂಕಾಟದ ನಡುವೆಯೆ ಪೊಲೀಸರು ಪ್ರತಿಭಟನಾಕಾರರನ್ನು‌ ನಿಯಂತ್ರಿಸಲು ಹರಸಾಹಸಪಡಬೇಕಾಯಿತು. ಬೆಳಗ್ಗೆಯಿಂದಲೂ ಪ್ರತಿಭಟನಕಾರರು ಹೋರಾಟವನ್ನು ನಡೆಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.