ETV Bharat / state

ಹುಬ್ಬಳ್ಳಿಗೆ ಬರಲಿದೆ ವಂದೇ ಭಾರತ್ ರೈಲು: ಯಾವಾಗ ಗೊತ್ತೇ?

author img

By

Published : Dec 8, 2022, 4:33 PM IST

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ 2023ರ ಮಾರ್ಚ್‌ನಲ್ಲಿ ಸಂಚಾರ ಪ್ರಾರಂಭಿಸುವ ಸಾಧ್ಯತೆ ಇದ್ದು, ನೈಋತ್ಯ ರೈಲ್ವೆ ವಲಯದಿಂದ ಕೆಲಸ ಭರದಿಂದ ಸಾಗಿದೆ.

vande-bharat-express-is-to-start-running-between-hubli-and-bangalore-in-march-2023
ಹುಬ್ಬಳ್ಳಿಗೆ ಬರಲಿದೆ ವಂದೇ ಭಾರತ ರೈಲು: ಎಸ್.ಡಬ್ಲ್ಯೂ.ಆರ್ ಸಿದ್ಧತೆ

ಹುಬ್ಬಳ್ಳಿ: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆಯ ಹುಬ್ಬಳ್ಳಿ ರೈಲ್ವೇ ನಿಲ್ದಾಣ ಈಗ ಮತ್ತೊಂದು ಸಾರ್ವಜನಿಕ ಸೇವೆಯೊಂದಿಗೆ ಗುರುತಿಸಿಕೊಳ್ಳಲಿದೆ. ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿ-ಬೆಂಗಳೂರು ಮಧ್ಯೆ 2023ರ ಮಾರ್ಚ್‌ನಲ್ಲಿ ಸಂಚಾರ ಪ್ರಾರಂಭಿಸುವ ಸಾಧ್ಯತೆ ಇದ್ದು, ನೈಋತ್ಯ ರೈಲ್ವೆ ವಲಯದಿಂದ ಕೆಲಸ ಭರದಿಂದ ಸಾಗಿದೆ.

ಈಗಾಗಲೇ ಚೆನ್ನೈ-ಬೆಂಗಳೂರು ಹಾಗೂ ಮೈಸೂರು ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಪ್ರಾರಂಭಿಸಿದೆ. ಎಸ್‌ಎಸ್ಎಸ್‌ ಹುಬ್ಬಳ್ಳಿ - ಬೆಂಗಳೂರು ಮಧ್ಯದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಧಾರವಾಡದವರೆಗೆ ವಿಸ್ತರಿಸುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪಹ್ಲಾದ್ ಜೋಶಿ ಮನವಿ ಮಾಡಿದ್ದು, ಈ ರೈಲು ಧಾರವಾಡದಿಂದ ಸಂಚಾರ ಪಾರಂಭಿಸುವ ಸಾಧ್ಯತೆ ಗೋಚರಿಸಿದೆ.

ವಂದೇ ಭಾರತ್​ ಎಕ್ಸ್​​ಪ್ರೆಸ್​​ನ ವಿಶೇಷತೆಗಳೇನು?: ವಂದೇ ಭಾರತ್‌ ರೈಲಿನಲ್ಲಿ ಸಂಚರಿಸುವುದೆಂದರೆ ವಿಮಾನದಲ್ಲಿ ಸಂಚರಿಸಿದ ಅನುಭವ. ವೇಗ, ಸುರಕ್ಷತೆ ಮತ್ತು ಅತ್ಯಾಧುನಿಕ ಸೇವೆ ಈ ರೈಲಿನಲ್ಲಿ ದೊರೆಯಲಿವೆ. ವಿಮಾನದಲ್ಲಿ ಸಿಗುವ ಎಲ್ಲ ಸೌಲಭ್ಯಗಳು ಈ ರೈಲಿನಲ್ಲಿ ಸಿಗಲಿವೆ. ಪ್ರತಿ ಸೀಟಿಗೆ ಮೊಬೈಲ್‌ ಚಾರ್ಜರ್, ತಿಂಡಿಯ ಟೇಬಲ್ ಇರಲಿವೆ. ಎಲ್ಲ ಬೋಗಿಗಳಲ್ಲಿ ಸ್ವಯಂಚಾಲಿತ ಬಾಗಿಲು, ಪ್ರಯಾಣಿಕರಿಗೆ ಆಡಿಯೋ ಮೂಲಕ ಮಾಹಿತಿ ನೀಡುವ ಸೌಲಭ್ಯ, ಮನರಂಜನೆಗಾಗಿ ವೈಫೈ ಸೌಲಭ್ಯ, ಸುಖಕರ ಆಸನಗಳು, ಬಯೋವ್ಯಾಕ್ಯೂಮ್ ಹೊಂದಿದ ಶೌಚಗೃಹ ರೈಲಿನಲ್ಲಿರಲಿವೆ.

ಪ್ರತಿ ಬೋಗಿಯಲ್ಲಿ ಪ್ರಯಾಣಿಕರು ಇರುವ ಸ್ಥಳದಲ್ಲಿಯೇ ತಿಂಡಿ, ಊಟ ಪೂರೈಸಲಾಗುತ್ತದೆ. 16 ಎಸಿ ಬೋಗಿಗಳಲ್ಲಿ 2 ಎಕ್ಸಿಕ್ಯೂಟಿವ್ ಕ್ಲಾಸ್ ಬೋಗಿಗಳು ಇರಲಿವೆ. 1,128 ಪ್ರಯಾಣಿಕರು ಏಕಕಾಲಕ್ಕೆ ಪ್ರಯಾಣಿಸಬಹುದು. ಅಂಗವಿಕಲ ಪ್ರಯಾಣಿಕರಿಗೂ ವಿಶೇಷ ಸೌಲಭ್ಯಗಳು ಇವೆ. ಈ ರೈಲು ನಿಯಮಿತ ನಿಲುಗಡೆಗಳನ್ನು ಹೊಂದಿದ್ದು, ಪ್ರಮುಖ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆಗೊಳ್ಳಲಿದೆ.

ಇದನ್ನೂ ಓದಿ: ಮೈಸೂರಿಗೆ ತಲುಪಿದ ವಂದೇ ಭಾರತ್​ ಎಕ್ಸ್​ಪ್ರೆಸ್​: ಜರ್ನಿ ಚೆನ್ನಾಗಿತ್ತು ಎಂದ ಪ್ರಯಾಣಿಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.