ETV Bharat / state

ಯೋಗೇಶ್ ಗೌಡ ಹತ್ಯೆ ಪ್ರಕರಣ : ಸಾಕ್ಷಿ ನಾಶದ ಕೇಸ್ ವಿಚಾರಣೆ ಮುಂದೂಡಿದ ನ್ಯಾಯಾಲಯ

author img

By

Published : Jan 2, 2021, 7:14 PM IST

ಸಿಬಿಐ ಅರ್ಜಿ ಪರಿಗಣಿಸಿ ನ್ಯಾಯಾಲಯ ದೂರು ದಾಖಲಿಸಿಕೊಂಡಿತ್ತು. ತನಿಖೆ ನಂತರ ಸಿಬಿಐ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಈ ಹಿಂದೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು..

yogesh-gowda-murder-case-court-adjourned-hearing
ಯೋಗೀಶ್ ಗೌಡ ಹತ್ಯೆ ಪ್ರಕರಣ

ಧಾರವಾಡ : ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶ ಆರೋಪ ಕೇಸ್ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಈಗಾಗಲೇ ಯೋಗೀಶ್ ಗೌಡ ಕೊಲೆ ಕೇಸ್‌ನಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಕುಲಕರ್ಣಿ ಸೇರಿ 8 ಜನರಿಗೆ‌ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. 8 ಜನರು ಇಂದಿನ ವಿಚಾರಣೆಗೆ ಗೈರಾದ ಹಿನ್ನೆಲೆ, ಪುನಃ ಹಾಜರಾಗಲು‌ ನ್ಯಾಯಾಲಯ ಮತ್ತೊಂದು ಅವಕಾಶ ನೀಡಿದೆ.‌ ಫೆ. 10ರಂದು ಹಾಜರಾಗಲು ಸೂಚಿಸಿ, ವಿಚಾರಣೆ ಮುಂದೂಡಿಕೆ ಮಾಡಿದೆ.

ಓದಿ: ಯೋಗೀಶ್​ ಗೌಡ ಹತ್ಯೆ ಪ್ರಕರಣ: ಧಾರವಾಡ ಕೋರ್ಟ್​ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ

ಧಾರವಾಡದ ಪ್ರಧಾನ ದಿವಾನಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಸಿಬಿಐ ಅರ್ಜಿ ಪರಿಗಣಿಸಿ ನ್ಯಾಯಾಲಯ ದೂರು ದಾಖಲಿಸಿಕೊಂಡಿತ್ತು. ತನಿಖೆ ನಂತರ ಸಿಬಿಐ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಈ ಹಿಂದೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.