ETV Bharat / state

ಹಾಸನದಲ್ಲಿ ನಿರ್ಗತಿಕ ಮಹಿಳೆಯ ಹತ್ಯೆ, ಅತ್ಯಾಚಾರ: ಕೊಲೆಗಾರನ ಬಂಧನಕ್ಕೆ ಆಗ್ರಹ

author img

By

Published : Aug 26, 2020, 5:25 PM IST

ನಿರ್ಗತಿಕ ಮಹಿಳೆಯನ್ನು ಕೊಲೆಗೈದು ಅತ್ಯಾಚಾರ ಎಸಗಿ ವಿಕೃತಿ ಮೆರೆದ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಹಾಸನದಲ್ಲಿ ಕರವೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

appeal for rapist arrest and punishment
ಕೊಲೆಗಾರರನ್ನು ಬಂಧಿಸುವಂತೆ ಕರವೇ ಮನವಿ

ಹಾಸನ: ಮಹಿಳೆಯೋರ್ವಳನ್ನು ಕೊಲೆ ಮಾಡಿ, ಅತ್ಯಾಚಾರ ಎಸಗಿದ ಕಾಮುಕನನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಆರ್. ಗಿರೀಶ್​​ರವರಿಗೆ ಮನವಿ ಸಲ್ಲಿಸಲಾಯಿತು.​ ​ ​ ​

ಕೊಲೆಗಾರರನ್ನು ಬಂಧಿಸುವಂತೆ ಕರವೇ ಮನವಿ

ನಗರದ ಹೃದಯ ಭಾಗವಾದ ಎನ್.ಆರ್. ವೃತ್ತದ ಬಳಿ ನಿರ್ಗತಿಕ ಮಹಿಳೆಯನ್ನು ಕಳೆದ ಒಂದು ದಿನದ ಹಿಂದೆ ರಾತ್ರಿ ವೇಳೆ ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಷ್ಟಕ್ಕೆ ಸುಮ್ಮನಾಗದ ಕಾಮುಕನು ಹತ್ಯೆಗೈದ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಂತಹ ವಿಕೃತ ಕಾಮಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಕೊಲೆಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿವೆ. ಇದು ಮಾನವ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ಅತ್ಯಾಚಾರಿಯನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು. ಜೊತೆಗೆ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.