ಹಾಸನ: ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

author img

By

Published : Sep 6, 2021, 8:11 PM IST

Updated : Sep 6, 2021, 8:50 PM IST

Boy died

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಜೋಕಾಲಿ ಆಟವಾಡುವ ಸಮಯದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.

ಹಾಸನ: ಜೋಕಾಲಿ ಆಟವಾಡುವ ಸಮಯದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

ಮನೋಜ್ (8) ಮೃತ ಬಾಲಕ. ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಕೃಷಿ ಕೆಲಸಕ್ಕೆಂದು ಪೋಷಕರು ಮಗನನ್ನು ಮನೆಯಲ್ಲಿ ಬಿಟ್ಟು ತೆರಳಿದ್ದರು. ಆಗ ಮನೆಯಲ್ಲಿ ಕಟ್ಟಿದ ಜೋಕಾಲಿ ಆಟವಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿಕೊಂಡಿದೆ.

ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಬಾಣವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕ ಕೋವಿಡ್ ರಿಪೋರ್ಟ್ : ಇಂದು 973 ಮಂದಿಗೆ ಕೊರೊನಾ,17 ಸೋಂಕಿತರ ಸಾವು

Last Updated :Sep 6, 2021, 8:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.