ETV Bharat / state

ಕಾಂಗ್ರೆಸ್​ಗೆ ಬಸ್ಸಿನಲ್ಲಿ ಕೂರುವಷ್ಟು ಸೀಟು ಬರಲ್ಲ: ಅಶ್ವತ್ಥ್​ ನಾರಾಯಣ ವ್ಯಂಗ್ಯ

author img

By

Published : Apr 1, 2023, 9:53 PM IST

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರೇ ರದ್ದು ಮಾಡಿ ಮನೆಗೆ ಕಳಿಹಿಸುವಂತಹ ಕೆಲಸವನ್ನ ಮಾಡುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​ ನಾರಾಯಣ ಹೇಳಿದರು.

congress-does-not-get-enough-seats-to-sit-in-the-bus-aswath-narayan
ಕಾಂಗ್ರೆಸ್​ಗೆ ಬಸ್ಸಿನಲ್ಲಿ ಕೂರುವಷ್ಟು ಸೀಟು ಬರಲ್ಲ: ಅಶ್ವತ್ಥ್​ ನಾರಾಯಣ ವ್ಯಂಗ್ಯ

ಕಾಂಗ್ರೆಸ್​ಗೆ ಬಸ್ಸಿನಲ್ಲಿ ಕೂರುವಷ್ಟು ಸೀಟು ಬರಲ್ಲ: ಅಶ್ವತ್ಥ್​ ನಾರಾಯಣ ವ್ಯಂಗ್ಯ

ಹಾಸನ: ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಧರ್ಮಾಧಾರಿತವಾದ ಮೀಸಲಾತಿ ಕೊಡಲು ಎಲ್ಲೂ ಅವಕಾಶ ಇರುವುದಿಲ್ಲ. ಅದನ್ನು ಸರಿಪಡಿಸಿ ಮುಸ್ಲಿಮರಿಗೆ ಆರ್ಥಿಕವಾಗಿ ಹಿಂದುಳಿದ ವರ್ಗದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​​ ನಾರಾಯಣ ಹೇಳಿದರು.

ಹಾಸನದ ನಗರದ ಹೊರವಲಯದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಮೀಸಲಾತಿ ರದ್ದು ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಾಧಾರಿತವಾಗಿ ಮೀಸಲಾತಿ ಕೊಡಲು ಆಗುವುದಿಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಧರ್ಮಾಧಾರಿತ ಮೀಸಲಾತಿ ಕೊಡಲು ಅವಕಾಶ ಇರುವುದಿಲ್ಲ. ವರ್ಗ 1 ಮತ್ತು ವರ್ಗ 2 ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದಲ್ಲೂ ಮುಸ್ಲಿಮರಿಗೆ ಮೀಸಲಾತಿ ಇದೆ. ಬಹಳ ದೊಡ್ಡಮಟ್ಟದಲ್ಲಿ ಎಲ್ಲರಿಗೂ ಸಲ್ಲುವಂತಾ ರೀತಿಯಲ್ಲಿ ಅವರ ಅಪೇಕ್ಷೆಯಂತೆ ಮೀಸಲಾತಿ ನೀಡಲಾಗಿದೆ ಎಂದು ಹೇಳಿದರು.

ಇನ್ನು ಕಾಂಗ್ರೆಸ್ ಸರ್ಕಾರ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಆದೇಶ ವಾಪಸ್ಸು ಪಡೆಯೋದಾಗಿ ಕೈ ನಾಯಕರ ಹೇಳಿಕೆ ವಿಚಾರಕ್ಕೆ ಉತ್ತರಿಸಿ, ಮೊದಲನೆಯದಾಗಿ ಕಾಂಗ್ರೆಸ್​​​ ಅಧಿಕಾರಕ್ಕೆ ಬರುವುದಿಲ್ಲ. ಇನ್ನು ರದ್ದು ಮಾಡಲು ಮುಂದಾದರೇ ಅವರೇ ರದ್ದಾಗಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರೇ ರದ್ದು ಮಾಡಿ ಮನೆಗೆ ಕಳುಹಿಸುವಂತಹ ಕೆಲಸ ಮಾಡುತ್ತಾರೆ. ಇನ್ನು ಬಸ್ಸಿನಲ್ಲಿ ಹೋಗುವಷ್ಟು ಸೀಟ್​ ಕೂಡ ಅವರಿಗೆ ಬರುವುದಿಲ್ಲ ಸಂಪೂರ್ಣವಾಗಿ ಸೋಲಲಿದೆ ಎಂದು ಹೇಳಿದರು.

2008 ಮತ್ತು 2018ರಲ್ಲಿ ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬಂದಿರಲಿಲ್ಲ. ಈ ಬಾರಿ ಚುನಾವಣೆಯಲ್ಲಿ ಪೂರ್ಣ ಬಹುಮತಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಮತ್ತು ಸ್ವಂತ ಬಲದಿಂದ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರತಿಯೊಂದು ಜಾತಿ ಜನಾಂಗಕ್ಕೂ ಸೇವೆಯನ್ನು ಮಾಡಿದ್ದೇವೆ. ಎಲ್ಲಾ ವರ್ಗದ ಜನರಿಗೆ ಉತ್ತಮ ಆಡಳಿತ ಕೊಟ್ಟಿದ್ದೇವೆ. ಅದರ ಆಧಾರದ ಮೇಲೆ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ಪಕ್ಷದ ಚಿಹ್ನೆ ಬಳಸಿದ್ದಕ್ಕೆ ಚುನಾವಣಾ ಆಯೋಗದಿಂದ ನೋಟಿಸ್​​: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪಕ್ಷದ ಚಿಹ್ನೆ ಬಳಸಿ ಶುಭಾಶಯ ಕೋರಿದ ಇಬ್ಬರು ಬಿಜೆಪಿ ಹಾಲಿ ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಮತ್ತು ಸೋಮವಾರ ಪೇಟೆ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ನೋಟಿಸ್ ನೀಡಲಾಗಿದೆ. ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಮತ್ತು ಡಾ.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಅಂಗವಾಗಿ ಬಿಜೆಪಿ ಪಕ್ಷದ ಚಿಹ್ನೆ ಬಳಸಿ ಶುಭಾಶಯ ಕೋರಿದ ಹಿನ್ನೆಲೆ ನೀತಿ ಸಂಹಿತೆ ಉಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: ಲೋಕಾಯುಕ್ತ ಕಸ್ಟಡಿ ಅವಧಿ ಅಂತ್ಯ: ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ನ್ಯಾಯಾಂಗ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.