ETV Bharat / state

ಬೇಲೂರು ಪುರಸಭೆ ಚುನಾವಣೆಯಲ್ಲಿ ಜೆಡಿಎಸ್​ಗೆ ಭಾರಿ ಮುಖಭಂಗ

author img

By

Published : Apr 30, 2021, 4:21 PM IST

Updated : Apr 30, 2021, 5:24 PM IST

ಬೇಲೂರು ಪುರಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ,ಕಾಂಗ್ರೆಸ್ 17 ಸ್ಥಾನ ಪಡೆದು ಭರ್ಜರಿ ಗೆಲುವು ಸಾಧಿಸಿದೆ.

congress
congress

ಹಾಸನ: ಬೇಲೂರು ಪುರಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಈ ಬಾರಿ ತನ್ನ ಬಾವುಟವನ್ನು ಹಾರಿಸಿದೆ.

ಕಳೆದ ಬಾರಿ 13 ಸ್ಥಾನಗಳನ್ನು ಗೆದ್ದಿದ್ದ ಜೆಡಿಎಸ್, ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಆದರೆ ಈ ಬಾರಿ ಕೇವಲ ಐದು ಸ್ಥಾನಗಳಿಗೆ ಸೀಮಿತವಾಗಿ ತೀವ್ರ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ 17 ಸ್ಥಾನ ಪಡೆದು ಭರ್ಜರಿ ಗೆಲುವು ಸಾಧಿಸಿದೆ.

ಬೇಲೂರು ಪುರಸಭೆ ಚುನಾವಣೆಯಲ್ಲಿ ಜೆಡಿಎಸ್​ಗೆ ಭಾರಿ ಮುಖಭಂಗ

ಚುನಾವಣೆ ಸಂದರ್ಭದಲ್ಲಿ ಅಷ್ಟೇ ಅಲ್ಲದೆ ಚುನಾವಣೆಗೂ ಮುನ್ನ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿಶೇಷವಾಗಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದರು. ಆದ್ರೆ ಮತದಾನ ಪ್ರಭುಗಳು ಮಾತ್ರ ಜೆಡಿಎಸ್​​ಅನ್ನು ಈ ಬಾರಿ ತಿರಸ್ಕಾರ ಮಾಡಿರುವುದು ಜೆಡಿಎಸ್​ಗೆ ಭಾರೀ ಹಿನ್ನಡೆಯಾಗಿದೆ.

ಇಂದು ಹೊರಬಿದ್ದ ಫಲಿತಾಂಶದಲ್ಲಿ ಕಾಂಗ್ರೆಸ್ 17 ಸ್ಥಾನ ಪಡೆದರೆ, ಜೆಡಿಎಸ್ 5 ಸ್ಥಾನಗಳನ್ನು ಪಡೆದಿದೆ. ಇನ್ನು ಬಿಜೆಪಿ ಪಕ್ಷ ಕೇವಲ 1 ಸ್ಥಾನ ಪಡೆಯುವ ಮೂಲಕ ತನ್ನ ಖಾತೆ ತೆರೆದಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಹಾಸನದಲ್ಲಿ ಪ್ರೀತಮ್ ಗೌಡ ತಮ್ಮದೇ ವರ್ಚಸ್ಸನ್ನು ಉಳಿಸಿಕೊಂಡಿದ್ದಾರೆ. ಇದರ ನಡುವೆ ಬಿಜೆಪಿಯ ಜಿಲ್ಲಾಧ್ಯಕ್ಷರಾಗಿ ಬೇಲೂರಿನ ಹುಲ್ಲಹಳ್ಳಿ ಸುರೇಶ್ ಗೌಡ ಪುರಸಭಾ ಚುನಾವಣೆಯಲ್ಲಿ ಶ್ರಮ ವಹಿಸಿಲ್ಲ ಎನ್ನಲಾಗುತ್ತಿದೆ.

Last Updated : Apr 30, 2021, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.