ETV Bharat / state

ಆರೋಗ್ಯವಂತ ಮಗುವಿನಿಂದ ದೇಶದ ಅಭಿವೃದ್ಧಿ ಸಾಧ್ಯ: ಶಾಸಕ ಪ್ರೀತಂ ಜೆ. ಗೌಡ

author img

By

Published : Oct 14, 2020, 5:18 PM IST

ಶಾಸಕ ಪ್ರೀತಂ ಜೆ. ಗೌಡ
ಶಾಸಕ ಪ್ರೀತಂ ಜೆ. ಗೌಡ

ಮಕ್ಕಳ ಆರೋಗ್ಯ ಮತ್ತು ಅಪೌಷ್ಠಿಕತೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ತೆಗೆದುಕೊಂಡು ಮಗುವಿನ ಆರೋಗ್ಯ ಸಂರಕ್ಷಣೆಗೆ ಶ್ರಮಿಸುವಂತೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವಂತೆ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದರು.

ಹಾಸನ: ಆರೋಗ್ಯವಂತ ಮಗುವಿನಿಂದ ದೇಶದ ಅಭಿವೃದ್ಧಿ ಸಾಧ್ಯ ಹಾಗಾಗಿ ಮಗು ಅಪೌಷ್ಠಿಕವಾಗಿ ಜನನ ಹೊಂದದಂತೆ ಗರ್ಭಿಣಿಯರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವಂತೆ ಶಾಸಕ ಪ್ರೀತಂ ಜೆ. ಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್​ ವಿತರಣೆ

ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಸನ, ಇವರು ಏರ್ಪಡಿಸಿದ್ದ ಪೋಷಣ್ ಅಭಿಯಾನ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಶಾಸಕ ಪ್ರೀತಂ ಜೆ. ಗೌಡ, ಮಕ್ಕಳ ಆರೋಗ್ಯ ಮತ್ತು ಅಪೌಷ್ಠಿಕತೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ತೆಗೆದುಕೊಂಡು ಮಗುವಿನ ಆರೋಗ್ಯ ಸಂರಕ್ಷಣೆಗೆ ಶ್ರಮಿಸುವಂತೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವಂತೆ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿದಿರುವ ಮಾಹಿತಿಯನ್ನು ಮಕ್ಕಳಿಗೆ ಮತ್ತು ಕುಟುಂಬದವರಿಗೆ ತಿಳಿಸುವಂತೆ ಹಾಗೂ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರ್ಕಾರ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಪ್ರತಿ ಮನೆಮನೆಗೆ ಮಾಹಿತಿ ನೀಡುವಂತೆ ಹೇಳಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ದೇಶಾದ್ಯಂತ ಹಾಗೂ ರಾಜ್ಯಾದ್ಯಂತ ಇರುವ ಗರ್ಭಿಣಿಯರು, ಬಾಣಂತಿಯರು ಹಾಗೂ ಆರು ವರ್ಷದವರೆಗಿನ ಮಕ್ಕಳ ಪೌಷ್ಠಿಕಾಂಶದ ಕೊರತೆಯನ್ನು ನೀಗಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ಈ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ಮಾಡಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೋಷಣೆ ಅತ್ಯಂತ ಮುಖ್ಯವಾದದ್ದು. ಸರ್ಕಾರದಿಂದ ಉಚಿತವಾಗಿ ನೀಡುತ್ತಿರುವ ಪೌಷ್ಠಿಕ ಆಹಾರವನ್ನು ಬಳಸಿಕೊಳ್ಳಲು ಅರಿವು ಮೂಡಿಸಿ ಪ್ರೆರೇಪಿಸುವಂತೆ ಸೂಚಿಸಿದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.