ETV Bharat / state

ಹಾಸನ ನಗರಸಭೆ ಸದಸ್ಯನ ಬರ್ಬರ ಕೊಲೆ.. ಆಟೋದಲ್ಲಿ ಬಂದು ರಸ್ತೆಯಲ್ಲೇ ಕೊಚ್ಚಿ ಕೊಂದ್ರು!

author img

By

Published : Jun 1, 2022, 8:54 PM IST

Updated : Jun 1, 2022, 10:50 PM IST

16 ನೇ ವಾರ್ಡ್ ಸದಸ್ಯ ಪ್ರಶಾಂತ್ ಹತ್ಯೆಗೀಡಾದವರು. ಬೈಕ್​ನಲ್ಲಿ ಬರುವಾಗ ಅಡ್ಡಗಡ್ಡಿದ ಆಟೋದಲ್ಲಿ ಬಂದ ಕಿರಾತಕರು ಈ ಕೃತ್ಯ ಎಸಗಿದ್ದಾರೆ.

Prashant a member of the 16th Ward of Hassan murdered
Prashant a member of the 16th Ward of Hassan murdered Prashant a member of the 16th Ward of Hassan murdered

ಹಾಸನ: ಹಾಲಿ ನಗರಸಭಾ ಸದಸ್ಯ ಪ್ರಶಾಂತ್ ನಾಗರಾಜ್ ಅವರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನದ ಲಕ್ಷ್ಮಿಪುರ ಬಡಾವಣೆಯಲ್ಲಿ ನಡೆದಿದೆ. ಪ್ರಶಾಂತ್ ನಾಗರಾಜ್ (42) ಕೊಲೆಯಾದ ನಗರಸಭಾ ಸದಸ್ಯ. ಲಕ್ಷ್ಮಿಪುರ ಬಡಾವಣೆಯ ಜವೇನಹಳ್ಳಿ ಮಠದ ಬಳಿ ದ್ವಿಚಕ್ರವಾಹನದಲ್ಲಿ ಮನೆಕಡೆಗೆ ಹೋಗುವಾಗ ಹಿಂದಿನಿಂದ ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಹಾಸನ ನಗರಸಭೆ ಸದಸ್ಯನ ಬರ್ಬರ ಕೊಲೆ.. ಆಟೋದಲ್ಲಿ ಬಂದು ರಸ್ತೆಯಲ್ಲೇ ಕೊಚ್ಚಿ ಕೊಂದ್ರು!

ಸ್ಥಳಕ್ಕೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಎಸ್ಪಿ ನಂದಿನಿ, ಪೆನ್ಷನ್ ಮೊಹಲ್ಲಾ ಪೊಲೀಸರು ಸೇರಿದಂತೆ ಶ್ವಾನದಳ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದುಷ್ಕರ್ಮಿಗಳು ತಾವು ತಂದಿದ್ದ ಮಾರಕಾಸ್ತ್ರಗಳಿಂದ ನಗರಸಭಾ ಸದಸ್ಯ ಪ್ರಶಾಂತ್ ಎದೆಗೆ ಹಾಗೂ ಎಡಗೈ ತುಂಡರಿಸಿದ್ದಲ್ಲದೆ ದೇಹದ ನಾನಾ ಭಾಗಗಳಿಗೆ ಹೊಡೆದಿದ್ದಾರೆ. ಸ್ಥಳದಲ್ಲಿ ಪ್ರಶಾಂತ್ ಸ್ನೇಹಿತರು ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಸುತ್ತಮುತ್ತಲ ಬಡಾವಣೆಯ ನಾಗರಿಕರು ಜಮಾಯಿಸಿದ್ದರು.

ಮೇಲ್ನೋಟಕ್ಕೆ ಇದೊಂದು ಹಳೇ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ತಿಳಿದುಬಂದಿದ್ದು, ಆರೋಪಿಗಳನ್ನು ಹೆಡೆಮುರಿಕಟ್ಟಲು ಈಗಾಗಲೇ ಪೊಲೀಸರು ಮೂರು ತಂಡಗಳನ್ನು ರಚನೆ ಮಾಡಿದ್ದಾರೆ. ಘಟನಾ ಸ್ಥಳದಿಂದ ಆ್ಯಂಬುಲೆನ್ಸ್ ಮೂಲಕ ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಗೆ ಆಗಮಿಸಿದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಎಸ್ಪಿ ಶ್ರೀನಿವಾಸಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಣಾಮ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ರೇವಣ್ಣ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

Last Updated :Jun 1, 2022, 10:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.