ETV Bharat / state

ಸೋಮವಾರ ಸಂಜೆ ನಾನು ದೆಹಲಿಗೆ ಹೋಗ್ತಿರೋದು ನಿಜ: ಸಿಎಂ ಬೊಮ್ಮಾಯಿ

author img

By

Published : Dec 24, 2022, 1:52 PM IST

Updated : Dec 24, 2022, 2:58 PM IST

86ನೇ ಕನ್ನಡ ಸಾಹಿತ್ಯ ಸಮ್ಮೇಳನ ಓಪನ್ ಡೋರ್​ನಲ್ಲಿ ನಡೆಯುವುದರಿಂದ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

CM Basavaraja Bommai inaugurated the foundation stone laying program
ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಪತ್ರಕರ್ತರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ

ಹಾವೇರಿ: ಸೋಮವಾರ ಸಂಜೆ ನಾನು ದೆಹಲಿಗೆ ಹೋಗ್ತಿರೋದು ನಿಜ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮುದಾಯ ಭವನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಲ್ಲಿ ಹೋಗಿ ಚರ್ಚಿಸಿದ ನಂತರ ಯಾವುದರ ಕುರಿತು ಮಾತನಾಡಿದ್ದೇವೆ ಎಂಬುದರ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.

ಒಕ್ಕಲಿಗ ಹಾಗೂ ಪಂಚಮಸಾಲಿ ಸಮುದಾಯಗಳಿಗೆ ಮೀಸಲಾತಿ ವಿಚಾರ ಕುರಿತಂತೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಎಲ್ಲಾ ಮಟ್ಟದಲ್ಲಿ ಚರ್ಚೆ ಆಗಿದೆ ಎಂದರು. ಕೊರೊನಾ ಭೀತಿ ಹಿನ್ನೆಲೆ ಈಗಾಗಲೇ ಟೆಸ್ಟ್​ಗಳನ್ನು ಹೆಚ್ಚಿಸುತ್ತಿದ್ದೇವೆ. ಬೂಸ್ಟರ್ ಡೋಸ್ ಕೂಡ ಜಾಸ್ತಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳು, ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಮಾಡುತ್ತಿದ್ದೇವೆ. ವಿಮಾನ ನಿಲ್ದಾಣ ಹಾಗೂ ಬಸ್​ ನಿಲ್ದಾಣಗಳಲ್ಲಿ ನಿಗಾ ಇಡಲು ಸೂಚನೆ ನೀಡಿದ್ದೇನೆ ಎಂದು ಹೆಳಿದರು.

86ನೇ ಕನ್ನಡ ಸಾಹಿತ್ಯ ಸಮ್ಮೇಳನ ಓಪನ್ ಡೋರ್​ನಲ್ಲಿ ನಡೆಯುವುದರಿಂದ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಬಜೆಟ್​ನ ಎಲ್ಲ ಸಿದ್ದತೆಗಳನ್ನು ಜನವರಿ ತಿಂಗಳಿನಿಂದಲೇ ಶುರು ಮಾಡಲಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ಕೋವಿಡ್​ ವಿಚಾರದಲ್ಲಿ ಪ್ರಧಾನಮಂತ್ರಿ ಸೂಚಿಸಿದಂತೆ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಬೊಮ್ಮಾಯಿ

Last Updated : Dec 24, 2022, 2:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.