ETV Bharat / state

ಶಿಗ್ಗಾಂವಿಯಲ್ಲಿ ಸಿಎಂ ಭರ್ಜರಿ ರೋಡ್​ ಶೋ: ನಟ ಸುದೀಪ್​, ನಡ್ಡಾ ಜತೆಗೆ ಬಂದು ನಾಮಪತ್ರ ಸಲ್ಲಿಕೆ​.. ಕಾಂಗ್ರೆಸ್​​ ಅಂದರೆ ಭ್ರಷ್ಟಾಚಾರ ಎಂದು ನಡ್ಡಾ ವಾಗ್ದಾಳಿ

author img

By

Published : Apr 19, 2023, 2:39 PM IST

Updated : Apr 19, 2023, 3:01 PM IST

ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು. ನಟ ಕಿಚ್ಚ ಸುದೀಪ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ನಳಿನ್​ಕುಮಾರ್​ ಕಟೀಲ್​ ಜೊತೆಗಿದ್ದರು. ರೋಡ್​ ಶೋ ಬಳಿಕ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದರು.

BJP national president JP Nadda, Karnataka CM Basavaraj Bommai
BJP national president JP Nadda, Karnataka CM Basavaraj Bommai

ಹಾವೇರಿ: ರಾಜ್ಯ ಚುನಾವಣಾ ಕಣ ರಂಗೇರಿದೆ. ಅತಿರಥ - ಮಹಾರಥ ನಾಯಕರೆಲ್ಲ ನಾಮಪತ್ರ ಸಲ್ಲಿಸಿ ಅಖಾಡಕ್ಕೆ ಧುಮುಕುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಹ ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಚಿತ್ರನಟ ಸುದೀಪ್ ಬಿಜೆಪಿ‌ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಸಚಿವ ಗೋವಿಂದ ಕಾರಜೋಳ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಿನೇಷನ್​ ಸಲ್ಲಿಕೆ ಬಳಿಕ ಮಾತನಾಡಿದ ಅವರು ಚುನಾವಣೆಯಲ್ಲಿ ಪಕ್ಷ ನಿರೀಕ್ಷೆಯಂತೆ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • #WATCH | BJP national president JP Nadda, Karnataka CM Basavaraj Bommai, Kannada actor Kiccha Sudeep and other BJP leaders hold a road show in Shiggaon.

    Karnataka CM filed his nomination from the Assembly constituency. pic.twitter.com/Es4iOq5xCb

    — ANI (@ANI) April 19, 2023 " class="align-text-top noRightClick twitterSection" data=" ">

ಇದಕ್ಕೂ ಮುನ್ನ ಶಿಗ್ಗಾಂವಿಯಲ್ಲಿ ತಮ್ಮ ಬಲ ಪ್ರದರ್ಶನ ತೋರಿಸಿದರು. ಇಂದು ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್​ ಶೋ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ನಟ ಕಿಚ್ಚ ಸುದೀಪ್ ಸೇರಿದಂತೆ ಬಿಜೆಪಿ ನಾಯಕರು ರೋಡ್ ಶೋದಲ್ಲಿ ಭಾಗಿಯಾಗಿದ್ದರು.

ತೆರೆದ ವಾಹನದಲ್ಲಿ ನಾಯಕರು ಮತದಾರರತ್ತ ಕೈಬೀಸುತ್ತಾ ಸಾಗಿದರು. ರೋಡ್​ ಶೋ ನಡೆದ ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಜನಸ್ತೋಮವೇ ಬಂದಿತ್ತು. ಸಿಎಂ ಜೊತೆಗೆ ಪ್ರಚಾರಕ್ಕೆ ಆಗಮಿಸಿರುವ ನಟ ಸುದೀಪ್​ ಕೂಡ ಅಭಿಮಾನಿಗಳತ್ತ ಕೈಬೀಸಿದರು. ನೆಚ್ಚಿನ ನಟನನ್ನು ಕಾಣಲು ಜನರು ಆಗಮಿಸಿದ್ದರು. ಶಿಗ್ಗಾಂವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಬೃಹತ್ ರೋಡ್ ಶೋ ಆರಂಭವಾಯಿತು. ಹಳೆ ಬಸ್​ ನಿಲ್ದಾಣದ ಮೂಲಕ‌ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ, ತಾಲೂಕು ಕ್ರೀಡಾಂಗಣದಲ್ಲಿ ರೋಡ್ ಶೋ ಮುಕ್ತಾಯಗೊಂಡಿತು.

ರೋಡ್​ ಶೋ ಗೂ ಮುನ್ನ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಧಾನಿ ಮೋದಿ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ಅವರ ಪರ ಪ್ರಚಾರ ಮಾಡುವುದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆಯನ್ನು ಹೆಚ್ಚಿಸಿದೆ ಎಂದು ಹೇಳಿದರು.

ಇನ್ನು ರೋಡ್​ ಶೋ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಅಪರಾಧೀಕರಣ ಎಂದು ಟೀಕಾಪ್ರಹಾರ ನಡೆಸಿದರು. ಅಭಿವೃದ್ಧಿಗೆ ಮತ ನೀಡುವಂತೆ ಎಲ್ಲರಿಗೂ ಮನವಿ ಮಾಡಲು ಬಂದಿದ್ದೇನೆ ಎಂದು ಹೇಳಿದರು.

  • #WATCH | BJP national president JP Nadda, Karnataka CM Basavaraj Bommai, Kannada actor Kiccha Sudeep and other BJP leaders hold a road show in Shiggaon.

    Karnataka CM Basavaraj Bommai filed his nomination from the Assembly constituency.#KarnatakaElection pic.twitter.com/tUCaD6srRv

    — ANI (@ANI) April 19, 2023 " class="align-text-top noRightClick twitterSection" data=" ">

ನಡ್ಡಾ ಬಳಿಕ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ನಟ ಕಿಚ್ಚ ಸುದೀಪ್ ಹುಬ್ಬಳ್ಳಿ ವಿಮಾನ ನಿಲ್ದಾಣದಕ್ಕೆ ಬಂದಿಳಿದರು. ಈ ವೇಳೆ ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡಿದರು. ಬಳಿಕ ಹಾವೇರಿಗೆ ಆಗಮಿಸಿದರು.

ತಾಲೂಕು ಮೈದಾನದಲ್ಲಿ ಸಮಾವೇಶ: ರೋಡ್​ ಶೋ ಮುಕ್ತಾಯದ ಬಳಿಕ ತಾಲೂಕು ಮೈದಾನದಲ್ಲಿ ಸಮಾವೇಶ ನಡೆಯಿತು. ನಡ್ಡಾ, ಕಟೀಲ್, ಸುದೀಪ್‌ ಹಾಗೂ ಸಿಎಂ ಬೊಮ್ಮಾಯಿ ಸೇರಿದಂತೆ ವಿವಿಧ ಮುಖಂಡರು ಭಾಷಣ ಮಾಡಿದರು.

ಸಿಎಂ ಇಂದು ನಾಮಪತ್ರ ಸಲ್ಲಿಕೆ: ಏ.15ರಂದು‌ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು‌ ನಾಮಪತ್ರ ಸಲ್ಲಿಸಲಿದ್ದಾರೆ.

ಓದಿ: ಇಂದು ಭರ್ಜರಿ ರೋಡ್ ಶೋ ಮೂಲಕ ಸಿಎಂ ನಾಮಪತ್ರ ಸಲ್ಲಿಕೆ.. ಬೊಮ್ಮಾಯಿಗೆ ಸುದೀಪ್​, ನಡ್ಡಾ ಸಾಥ್​

Last Updated :Apr 19, 2023, 3:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.