ETV Bharat / state

ಮಚ್ಚಿನಿಂದ ಪತ್ನಿ ಮೇಲೆ ಹಲ್ಲೆ, ಕತ್ತು ಕೊಯ್ದುಕೊಂಡು ಗಂಡ ಸಾವು!

author img

By

Published : Jan 24, 2021, 12:36 AM IST

ಮೈಲಪ್ಪ ತಂಬೂರಿ(50),ಚಿಕಿತ್ಸೆ ಫಲಕಾರಿಯಾಗದೆ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

Man death in ranibennur
Man death in ranibennur

ರಾಣೆಬೆನ್ನೂರು: ಕೌಟುಂಬಿಕ ಕಲಹ ಹಿನ್ನೆಲೆ ಮಚ್ಚಿನಿಂದ ಪತ್ನಿ ಮೇಲೆ ಹಲ್ಲೆ ಮಾಡಿ ತದನಂತರ ಕತ್ತು ಕಾಯ್ದುಕೊಂಡು ಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ; 6 ಮಂದಿ ಬಂಧನ, ನಾಳೆ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

ಮೈಲಪ್ಪ ತಂಬೂರಿ(50), ಚಿಕಿತ್ಸೆ ಫಲಕಾರಿಯಾಗದೆ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ರಾಣೆಬೆನ್ನೂರಿನ ಗಣೇಶ ನಗರದಲ್ಲಿ ಹೆಂಡತಿ ಮೇಲೆ ಹಲ್ಲೆ ಮಾಡಿ ತಾನು ಕತ್ತು ಕೊಯ್ದುಕೊಂಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳಿಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ‌ ಮೈಲಪ್ಪ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಹೆಂಡತಿಯನ್ನ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.